ಹಿಜಾಬ್ ವಿವಾದ: ಮುಸ್ಲಿಂ ಶಾಸಕರಿಂದ ಸಿಎಂ ಬೊಮ್ಮಾಯಿ ಭೇಟಿ

ಬೆಂಗಳೂರು: ರಾಜ್ಯಾದ್ಯಂತ ವಿವಾದದ ಕಿಡಿ ಹೊತ್ತಿಸಿರುವ ಹಿಜಾಬ್​ ವಿವಾದದ ಬೆನ್ನಲ್ಲೇ ಕಾಂಗ್ರೆಸ್​ ಮುಸ್ಲಿಂ ಶಾಸಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು, ಮಂಗಳವಾಋ ಬೆಂಗಳೂರಿನಲ್ಲಿ ಭೇಟಿ ಮಾಡಿದ್ದಾರೆ.
ಮುಖ್ಯಮಂತ್ರಿಗಳ ಅವರ ರೇಸ್​ಕೋರ್ಸ್​ ನಿವಾಸದಲ್ಲಿ ಭೇಟಿಯಾಗಿದ್ದು, ಹಿಜಾಬ್ ವಿವಾದ ಬಗ್ಗೆ ಚರ್ಚಿಸಿದರು ಹಾಗೂ ಆದಷ್ಟು ಶೀಘ್ರ ಈ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ಅಲ್ಲದೆ, ರಾಜ್ಯ ಬಜೆಟ್​ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚು ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಶಾಸಕರಾದ ಯು ಟಿ ಖಾದರ್, ಜಮೀರ್​ ಅಹ್ಮದ್ ಖಾನ್​​, ತನ್ವೀರ್​ ಸೇಠ್​, ಎನ್​​.ಎ.ಹ್ಯಾರಿಸ್​, ಸಲೀಂ ಅಹಮ್ಮದ್ , ರಿಜ್ವಾನ್ ಅರ್ಷದ್, ಖನೀಜ್ ಫಾತಿಮಾ ಮೊದಲಾದವರಿದ್ದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯು ಟಿ ಖಾದರ್, ಕಳೆದ ಎರಡು ವರ್ಷಗಳಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಶಿಕ್ಷಣ ಮತ್ತು ಸಬಲೀಕರಣ ಕಾರ್ಯಕ್ರಮಗಳಿಗೆ ಬಜೆಟ್‌ನಲ್ಲಿ ಕಡಿತ ಮಾಡಲಾಗಿದೆ. ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಎಲ್ಲ ಸಮುದಾಯಗಳ ಕಲ್ಯಾಣದ ಉದ್ದೇಶದಿಂದ ಸಮಾನವಾಗಿ ಹಣ ಹಂಚಿಕೆ ಮಾಡಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಐಇ ಅವರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 10ರ ವರೆಗೆ ಮಳೆ ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement