ಬೆಳ್ಳಂಬೆಳಗ್ಗೆ ಭೀಕರ ಕಾರು ಅಪಘಾತ: ನಾಲ್ವರು ವಿದ್ಯಾರ್ಥಿಗಳ ಸಾವು

ದೇವನಹಳ್ಳಿ; ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಟ್ಟೂರು ಗೇಟ್ ಬಳಿ ರಾ.ಹೆ. 75ರಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಇಂಜಿನಿರಿಂಗ್‌ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಗುದ್ದಿ ಪಕ್ಕದ ರಸ್ತೆಗೆ ಹಾರಿ ಲಾರಿಗೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮೃತರನ್ನು ವೈಷ್ಣವಿ, ಭರತ್, ಸಿರಿಲ್, ವೆಂಕಟ್ ಎಂದು ಹೇಳಲಾಗಿದೆ. ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಮೃತಪಟ್ಟ ವಿದ್ಯಾರ್ಥಿಗಳು ಬೆಂಗಳೂರಿನ ಗಾರ್ಡನ್ ಸಿಟಿ ಕಾಲೇಜ್ ವಿದ್ಯಾರ್ಥಿಗಳಾಗಿದ್ದು, ತಮಿಳುನಾಡು ನೋಂದಣಿಯ TN-77-P-4512 ಕಾರಿನಲ್ಲಿ ಕೋಲಾರದ ನರಸಾಪುರ ಬಳಿಯಿರೂ ಕೆಫೆ ಕಾಫಿ ಡೇ ಗೆ ಹೋಗಿದ್ದರು. ವಾಪಸ್ ಬರುವಾಗ ಅಟ್ಟೂರು ಗೇಟ್ ಬಳಿ ನಿಯಂತ್ರಣ ಕಳೆದುಕೊಂಡ ಕಾರು ಚಾಲಕ ಮೊದಲಿಗೆ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಲಾರಿಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಕಾರು ಬಿದ್ದಿದೆ. ಡಿಕ್ಕೆ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.
ಹೊಸಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಪ್ರಮುಖ ಸುದ್ದಿ :-   ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement