ಮಹತ್ವದ ಸುದ್ದಿ…ಪದವಿ ಪರೀಕ್ಷೆಗಳನ್ನು ಒಂದು ತಿಂಗಳು ಮುಂದೂಡಲು ರಾಜ್ಯದ ವಿವಿಗಳಿಗೆ ಸೂಚನೆ

ಬೆಂಗಳೂರು : ಕೋವಿಡ್‌ ಸೋಂಕು ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದ ಕಾರಣ ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಉನ್ನತ ಶಿಕ್ಷಣ ಇಲಾಖೆ ವಿಶ್ವ ವಿದ್ಯಾಲಯಗಳಿಗೆ ಸೂಚನೆ ನೀಡಿದೆ.
ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್ ಅವರು ವಿಶ್ವ ವಿದ್ಯಾಲಯಗಳಿಗೆ ಈ ಕುರಿತು ಸೂಚನೆ ನೀಡಿದ್ದಾರೆ.
ಈ ಬಗ್ಗೆ ಬುಧವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, `ಕೆಲವು ವಿ.ವಿ.ಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದವು. ಆದರೆ, ಕೊರೊನಾ ಮತ್ತು ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಬೋಧನಾ ಕಾರ್ಯ ಅಪೂರ್ಣವಾಗಿರುವ ಹಿನ್ನೆಲೆಯಲ್ಲಿ ಪದವಿ ಕೋರ್ಸುಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳಾದರೂ ಮುಂದೂಡುವಂತೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಕೋರಿದ್ದರು. ಹೀಗಾಗಿ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನಿಸಿ, ಪರೀಕ್ಷೆಯನ್ನು ಮುಂದೂಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ’ ಎಂದು ತಿಳಿಸಿದ್ದಾರೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement