ಬುರ್ಖಾಧಾರಿ ಮಹಿಳೆಯಿಂದ ಕ್ಯಾಬ್ ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ

ಗುರುಗ್ರಾಮ್: ಮತ್ತೊಂದು ಆಘಾತಕಾರಿ ಘಟನೆಯಲ್ಲಿ, ಬುರ್ಖಾ ಧರಿಸಿದ ಮಹಿಳೆಯೊಬ್ಬರು ಕ್ಯಾಬ್ ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಹರಿಯಾಣದ ಗುರುಗ್ರಾಮ್‌ನಲ್ಲಿ ನಡೆದಿದೆ.
ಗುರುಗ್ರಾಮ್‌ನ ರಾಜೀವ್ ಚೌಕ್ ನಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಗುರುತು ಮತ್ತು ಉದ್ದೇಶ ಇನ್ನೂ ತಿಳಿದುಬರಬೇಕಿಗದ್ದು, ಆಕೆಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಹನವನ್ನು ನಿಲ್ಲಿಸುವಂತೆ ಮಹಿಳೆ ಚಾಲಕನಿಗೆ ಸೂಚಿಸಿದ್ದಾಳೆ, ಆತ ನಿಲ್ಲಿಸಿದಾಗ, ಅವಳು ಚಾಕುವಿನಿಂದ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಆರೋಪಿಸಲಾಗಿದೆ.
ಏತನ್ಮಧ್ಯೆ, ಇಂದು ಗುರುಗ್ರಾಮ್‌ನ ಸೈಬರ್ ಸಿಟಿ ಬಳಿ ನಿಂತಿದ್ದ ಪಿಸಿಆರ್ ವ್ಯಾನ್ ಕ್ಯಾಬ್ ಚಾಲಕನನ್ನು ರಕ್ಷಿಸಲು ಬಂದಿದೆ ಹಾಗೂ ಮಹಿಳೆಯನ್ನು ವಶಕ್ಕೆ ತೆಗೆದುಕೊಂಡಿದೆ.
ಬುರ್ಖಾ ಧರಿಸಿದ ಮಹಿಳೆ ಕ್ಯಾಬ್ ಚಾಲಕನ ಮೇಲಿನ ದಾಳಿಯ ಕಾರಣ ಇನ್ನೂ ತಿಳಿದುಬಂದಿಲ್ಲ. ಮಂಗಳವಾರ ಸೈಬರ್ ಸಿಟಿ ಪ್ರದೇಶದ ಬಳಿ ಈ ಘಟನೆ ನಡೆದಿದ್ದು, ಕ್ಯಾಬ್ ಹತ್ತಿದ ನಂತರ, ಮಹಿಳಾ ಪ್ರಯಾಣಿಕರು ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಚಾಲಕನನ್ನು ರಘುರಾಜ್ ಎಂದು ಗುರುತಿಸಲಾಗಿದ್ದು, ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
ಮಾಹಿತಿಯ ಪ್ರಕಾರ ಸ್ಥಳೀಯ ಪೊಲೀಸರು ಸ್ಥಳಕ್ಕಾಗಮಿಸಿದಾಗ ಆಕೆ ಮಹಿಳಾ ಅಧಿಕಾರಿಯೊಂದಿಗೂ ಅನುಚಿತವಾಗಿ ವರ್ತಿಸಿದ್ದಾಳೆ. ಅಲ್ಲದೆ, ಆಕೆಗೆ ಪೊಲೀಸ್ ಅಧಿಕಾರಿಗಳು ಕೌನ್ಸೆಲಿಂಗ್ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಚುನಾವಣಾ ಭಾಷಣ ಮಾಡುವ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement