ಸಕಲ ಸರ್ಕಾರಿ ಗೌರವದೊಂದಿಗೆ ಚೆನ್ನವೀರ ಕಣವಿ ಅಂತ್ಯಕ್ರಿಯೆ

ಧಾರವಾಡ: ಚೆಂಬೆಳಕಿನ ಕವಿ, ನಾಡೋಜ ಚೆನ್ನವೀರ ಕಣವಿ ಅವರ ಅಂತ್ಯಕ್ರಿಯೆಯನ್ನು ಧಾರವಾಡದ ಅಳ್ನಾವರ ರಸ್ತೆಯಲ್ಲಿರುವ ಸೃಷ್ಟಿ ಫಾರ್ಮ್​ನಲ್ಲಿ ಬುಧವಾರ ನಡೆಸಲಾಯಿತು.
ಸಕಲ ಸರ್ಕಾರಿ ಗೌರವದೊಂದಿಗೆ ಸೃಷ್ಟಿ ಫಾರ್ಮ್​ನಲ್ಲಿ ಚೆನ್ನವೀರ ಕಣವಿಯವರ ಅಂತ್ಯಕ್ರಿಯೆ ನಡೆದಿದೆ. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ಕಣವಿಯರ ಇಚ್ಛೆಯಂತೆ ಪತ್ನಿ ಶಾಂತಾದೇವಿ ಸಮಾಧಿ ಪಕ್ಕದಲ್ಲೇ ಅವರ ಅಂತ್ಯಕ್ರಿಯೆ ಮಾಡಲಾಗಿದೆ.

ಪುತ್ರ ಶಿವಾನಂದ ಕಣವಿ ತಂದೆಯ ಅಂತಿಮ ವಿಧಿವಿಧಾನ ನೆರವೇರಿಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವ ಹಾಲಪ್ಪ ಆಚಾರ್​, ಶಾಸಕ ಅರವಿಂದ ಬೆಲ್ಲದ, ವಿವಿಧ ಗಣ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.
ಚೆನ್ನವೀರ ಕಣವಿ ಅಸೌಖ್ಯದಿಂದ ಜನವರಿ ೧೪ರಂದು ಧಾರವಾಡದ ಸತ್ತೂರಿನ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಇಂದು ಬುಧವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಣವಿಯವರ ಶ್ವಾಸಕೋಶದಲ್ಲಿ ಸೋಂಕಿನ ತೀವ್ರತೆ ಹೆಚ್ಚಾಗಿದ್ದು, ಎದೆ ಭಾಗದಲ್ಲಿ ಹೆಚ್ಚಿನ ಸೋಂಕು ಹರಡಿತ್ತು. ಶ್ವಾಸಕೋಶ ಉಸಿರಾಟದ ಶಕ್ತಿ ಕಳೆದುಕೊಂಡಿತ್ತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement