ಚಲಿಸುತ್ತಿರುವ ರೈಲಿನ ಸಮೇತ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ನಾಲ್ವರು

ಗುರುಗ್ರಾಮ್ (ದೆಹಲಿ): ದೆಹಲಿಯ ಹೊರವಲಯದಲ್ಲಿರುವ ಗುರುಗ್ರಾಮ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೇ ಮೇಲ್ಸೇತುವೆ (ಒಆರ್‌ಬಿ) ಬಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ನಾಲ್ವರು ಯುವಕರಿಗೆ ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಸರ್ಕಾರಿ ರೈಲ್ವೆ ಪೊಲೀಸ್ (GRP) ಪ್ರಕಾರ, ದೆಹಲಿಯ ಸರಾಯ್ ರೋಹಿಲ್ಲಾದಿಂದ ಅಜ್ಮೀರ್‌ಗೆ ಹೋಗುವ ಜನ ಶತಾಬ್ದಿ ಎಕ್ಸ್‌ಪ್ರೆಸ್ ಗುರುಗ್ರಾಮ್‌ ರೈಲು ನಿಲ್ದಾಣದಿಂದ ಬಸಾಯಿ ರೈಲು ನಿಲ್ದಾಣದ ಕಡೆಗೆ ಚಲಿಸುತ್ತಿದ್ದಾಗ ಮಂಗಳವಾರ ಸಂಜೆ 5 ಗಂಟೆಗೆ ಸುಮಾರಿಗೆ ಅಪಘಾತ ಸಂಭವಿಸಿದೆ.
18ರಿಂದ 21 ವರ್ಷ ವಯಸ್ಸಿನ ನಾಲ್ವರು ಯುವಕರು ರೈಲು ಸಮೀಪಿಸುತ್ತಿದ್ದಾಗ ಟ್ರ್ಯಾಕ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಪ್ರಾರಂಭಿಸಿದರು. ರೈಲು ಸಾಕಷ್ಟು ಸಮೀಪ ಬಂದರೂ ಯುವಕರು ಸೆಲ್ಫಿಯಲ್ಲಿ ರೈಲು ಬರಬೇಕು ಎಂದು ಕದಲದೆ ನಿಂತಿದ್ದರು. ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದು, ರೈಲು ಚಾಲಕನಿಂದ ಮಾಹಿತಿ ಪಡೆದ ತಕ್ಷಣ, ಜಿಆರ್‌ಪಿ ಪೊಲೀಸ್ ಠಾಣೆಯ ತಂಡವು ಸ್ಥಳಕ್ಕೆ ತಲುಪಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರನ್ನು ದೇವಿಲಾಲ್ ಕಾಲೋನಿ ನಿವಾಸಿಗಳಾದ ಸಮೀರ್ (19), ಮೊಹಮ್ಮದ್ ಅನಸ್ (20), ಯೂಸುಫ್ ಅಲಿಯಾಸ್ ಭೋಲಾ (21) ಮತ್ತು ಯುವರಾಜ್ ಗೋಗಿಯಾ (18) ಎಂದು ಗುರುತಿಸಲಾಗಿದೆ.

ಪ್ರಮುಖ ಸುದ್ದಿ :-   ಭಾರತದ ಆಕಾಶದಲ್ಲಿಲ್ಲ ಮಳೆ ತರುವ ಮೋಡಗಳು ; ಆತಂಕಕಾರಿ ವಾಸ್ತವ ಬಿಂಬಿಸಿದ 3 ಉಪಗ್ರಹಗಳ ಚಿತ್ರಗಳು ; ಇದಕ್ಕೆ ಕಾರಣಗಳೇನು?

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement