ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲೂ ಹಿಜಾಬ್, ಕೇಸರಿ ಶಾಲು, ಸ್ಕಾರ್ಫ್​​ಗೆ ನಿರ್ಬಂಧ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್‌ ಸಂಘರ್ಷದ ಹೊತ್ತಲ್ಲೇ ಸರ್ಕಾರದ ಮತ್ತೊಂದು ಆದೇಶ ಹೊರಬಿದ್ದಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲಿ ಹಿಜಾಬ್‌, ಕೇಸರಿ ಶಾಲು, ಸ್ಕಾರ್ಫ್​​​ ಧರಿಸದಂತೆ ಆದೇಶಿಸಿ ಸುತ್ತೋಲೆ ಹೊರಡಿಸಲಾಗಿದೆ.

ಹೈಕೋರ್ಟ್‌ ಮಧ್ಯಂತರ ಆದೇಶದ ನಂತರ ಸರ್ಕಾರ ಈ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಅಲ್ಪಸಂಖ್ಯಾತ ಕಲ್ಯಾಣ ಶಾಲೆಗಳಲ್ಲಿ ಹಿಜಾಬ್‌ ನಿಷೇಧಿಸಿ ಆದೇಶಿಸಿದೆ. ‌ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಮೌಲಾನಾ ಆಜಾದ್‌, ವಸತಿ ಶಾಲಾ-ಕಾಲೇಜುಗಳಿಗೆ ಇದು ಅನ್ವಯವಾಗಲಿದೆ.

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ವಸತಿ ಶಾಲಾ,ಕಾಲೇಜು ಮತ್ತು ಮೌಲಾನಾ ಆಜಾದ್‌ ಉರ್ದು ಶಾಲೆಗಳ ತರಗತಿಗಳಲ್ಲಿ ಕೇಸರಿ ಶಾಲು-ಸ್ಕಾರ್ಫ್‌, ಹಿಜಾಬ್‌ ಧರಿಸುವಂತಿಲ್ಲ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಧಾರ್ಮಿಕ ಧಿರಿಸು, ಯಾವುದೇ ಧರ್ಮದ ಬಾವುಟಗಳನ್ನು ಬಳಸುವಂತಿಲ್ಲ. ಇಲಾಖೆ ರೂಪಿಸಿದ ಸಮವಸ್ತ್ರವನ್ನು ಮಾತ್ರ ಧರಿಸಬೇಕು ಎಂದು ನಿಯಮದಲ್ಲಿ ಉಲ್ಲೇಖಿಸಲಾಗಿದೆ‌. ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಕೋರ್ಟ್‌ ಮಧ್ಯಂತರ ಆದೇಶವನ್ನ ಜಾರಿಗೆ ತರಲು ಪ್ರಯತ್ನಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement