ಗಯಾ ಶಾಕರ್…ಮಹಿಳೆಯರಿಗೆ ಹಿಂದೆ ಕೈಕಟ್ಟಿ ಕೋಳ ಹಾಕಿದ ಪೊಲೀಸರು..!

ಪಾಟ್ನಾ: ಬಿಹಾರದ ಗಯಾ ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡ ನಂತರ ಹಲವು ಮಹಿಳೆಯರ ಕೈಕೋಳ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪೊಲೀಸರ ಪ್ರಕಾರ ಬುಧವಾರ ಗಯಾ ಜಿಲ್ಲೆಯ ಬೆಳಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಣಿಗಾರಿಕೆ ಪ್ರದೇಶ ಗುರುತಿಸುವ ಸಂದರ್ಭದಲ್ಲಿ ಗ್ರಾಮಸ್ಥರ ಗುಂಪಿನ ಭಾಗವಾಗಿ ಮಹಿಳೆಯರು ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ ನಂತರ ಅವರನ್ನು ಬಂಧಿಸಲಾಗಿದೆ.
ಅಧಿಕೃತ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಕೆಲವು ಮಹಿಳೆಯರು ಸೇರಿದಂತೆ ಒಟ್ಟು 10 ಜನರನ್ನು ಬಂಧಿಸಲಾಗಿದೆ ಎಂದು ಗಯಾ ನಗರ ಎಸ್ಪಿ ರಾಕೇಶ್ ಕುಮಾರ್ ಗುರುವಾರ ತಿಳಿಸಿದ್ದಾರೆ.
ಅಧತ್‌ಪುರ ಗ್ರಾಮದ ಬಳಿ ಗಣಿಗಾರಿಕೆ ಘಾಟ್‌ಗಳ ಪ್ರದೇಶವನ್ನು ಗುರುತಿಸುವ ಆಡಳಿತದ ಉಪಕ್ರಮದಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಅವರು ಜಿಲ್ಲಾಧಿಕಾರಿ ಸಮ್ಮುಖದಲ್ಲಿ ತಂಡದ ಮೇಲೆ ದಾಳಿ ಮಾಡಿದರು, ಹನ್ನೆರಡು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ.
ಮತ್ತೊಂದೆಡೆ, ಮಳೆಗಾಲದಲ್ಲಿ ನದಿಯ ನೀರು ಗ್ರಾಮಕ್ಕೆ ನುಗ್ಗಿದ್ದರಿಂದ ಮರಳು ಘಾಟಿಯಲ್ಲಿ ಗಣಿಗಾರಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಧಿಕಾರಿಗಳು ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಗಣಿ ಘಾಟ್‌ಗಳ ಗಡಿ ಗುರುತಿಸಲು ಗಣಿ ಇಲಾಖೆ ಇತ್ತೀಚೆಗೆ ಪತ್ರ ನೀಡಿದ್ದು, ಜಿಲ್ಲಾಧಿಕಾರಿಯೊಂದಿಗೆ ಅಧಿಕಾರಿಗಳ ತಂಡವನ್ನು ನಿಯೋಜಿಸಲಾಗಿದೆ ಎಂದು ನಗರ ಎಸ್‌ಪಿ ಹೇಳಿದರು. ತಂಡದೊಂದಿಗೆ ಮಹಿಳಾ ಪೇದೆಗಳೂ ಜೊತೆಗಿದ್ದರು. ಆದರೆ, ಮಹಿಳೆಯರ ಕೈಕೋಳ ಹಾಕಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರಮುಖ ಸುದ್ದಿ :-   ರೈಲು ನಿಲ್ದಾಣದಲ್ಲಿ ವ್ಯಕ್ತಿಯ ಸಾವಿನ ರಹಸ್ಯ ಭೇದಿಸಿದ ರೈಲು ಪ್ರಯಾಣಿಕನ ಮೊಬೈಲ್‌ ಸೆಲ್ಫಿ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement