೪೫ ಸಾವಿರ ಹುದ್ದೆಗಳ ಭರ್ತಿಗೆ ಸರ್ಕಾರ ಪ್ರಕ್ರಿಯೆ ಆರಂಭ: ಸಿಎಂ ಬೊಮ್ಮಾಯಿ

ಬೆಂಗಳೂರು: ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ೪೫ ಸಾವಿರ ಹುದ್ದೆಗಳ ಭರ್ತಿಗೆ ಸರ್ಕಾರ ಪ್ರಕ್ರಿಯೆ ಆರಂಭಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾಪರಿಷತ್‌ನಲ್ಲಿ ಇಂದು, ಗುರುವಾರ ಹೇಳಿದರು.
೧೫ ಸಾವಿರ ಶಿಕ್ಷಕರ ನೇಮಕಾತಿ, ೧೬ ಸಾವಿರ ಪೊಲೀಸರ ನೇಮಕಾತಿ ಹಾಗೂ ಹೈದರಾಬಾದ್-ಕರ್ನಾಟಕದ ವಿವಿಧ ಇಲಾಖೆಗಳ ಸರಿಸುಮಾರು ೧೪ ಸಾವಿರ ಹುದ್ದೆಗಳು ಸೇರಿದಂತೆ ೪೫ ಸಾವಿರ ಹುದ್ದೆಗಳ ಭರ್ತಿಗೆ ಸರ್ಕಾರ ಪ್ರಕ್ರಿಯೆ ಆರಂಭಿಸಿದೆ.

ಪ್ರಶ್ನೋತ್ತರ ಅವಧಿಯಲ್ಲಿ ಕೆ.ಪಿ. ಶ್ರೀಕಂಠೇಗೌಡ, ಅರುಣ್ ಶಹಾಪುರ, ಆರ್. ದೇವೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಕೋವಿಡ್ ಸೇರಿದಂತೆ ಆರ್ಥಿಕ ಸಂಕಷ್ಟದಿಂದ ಹಲವು ವರ್ಷಗಳಿಂದ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೈಗೆತ್ತಿಕೊಂಡಿರಲಿಲ್ಲ. ಇದರ ನಡುವೆಯೂ ತೀರಾ ಅಗತ್ಯ ಮತ್ತು ಅನಿವಾರ್ಯ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿತ್ತು ಎಂದು ತಿಳಿಸಿದರು.

೪೫ ಸಾವಿರ ಹುದ್ದೆಗಳ ವಿವಿಧ ಹುದ್ದೆಗಳ ಭರ್ತಿ ಜೊತೆಗೆ ಹೊಸ ಹುದ್ದೆ ಮತ್ತು ಖಾಲಿ ಇರುವ ಹುದ್ದೆಗಳನ್ನು ಗುರುತಿಸಿ ಭರ್ತಿ ಮಾಡುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಅವರು ಹೇಳಿದರು.
ರಾಜ್ಯ ಸರ್ಕಾರಿ ನೌಕರರ ೬ನೇ ವೇತನ ಆಯೋಗ ಜಾರಿಯಲ್ಲಿದೆ. ೨೦೨೨-೨೩ನೇ ಸಾಲಿನಲ್ಲಿ ೭ನೇ ವೇತನ ಆಯೋಗ ರಚನೆ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಸರ್ಕಾರಿ ನೌಕರರಿಗೆ ವೇತನ, ಹುದ್ದೆ ಸೇರಿದಂತೆ ಇನ್ನಿತರ ವಿಷಯಗಳಲ್ಲಿ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

ಪ್ರಮುಖ ಸುದ್ದಿ :-   ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

ವೇತನ ತೊಂದರೆಯಿಂದ ನೌಕರರಿಗೆ ಆಗುತ್ತಿರುವ ಸಮಸ್ಯೆಗಳ ಅರಿವಿದೆ. ಹೀಗಾಗಿ ಇದನ್ನು ಸರಿಪಡಿಸಲು ಸಹ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement