ಬೆಂಗಳೂರು: ಕಾಂಗ್ರೆಸ್ಸಿನ ಮೇಕೆದಾಟು ಹೋರಾಟ ಫೆಬ್ರವರಿ 27 ರಿಂದ ಮತ್ತೆ ಆರಂಭಗೊಳ್ಳಲಿದ್ದು, ರಾಮನಗರದಿಂದ ಪಾದಯಾತ್ರೆ ಆರಂಭವಾಗಲಿದೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಸಂಗಮದಿಂದ ಜ.9 ರಂದು ಆರಂಭಿಸಿ ಮಧ್ಯೆ ನಿಲ್ಲಿಸಿದ್ದ ಮೇಕೆದಾಟು ಪಾದಯಾತ್ರೆ ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಐದು ದಿನಗಳ ಕಾಲ ನಡೆಸಿ ಕೋವಿಡ್ ನಿರ್ಬಂಧದ ಹಿನ್ನೆಲೆ ನಿಲ್ಲಿಸಿದ್ದ ನಮ್ಮ ನೀರು, ನಮ್ಮ ಹಕ್ಕು ಪಾದಯಾತ್ರೆಯನ್ನು ಫೆ.27 ರಿಂದ ರಾಮನಗರದಿಂದ ಮತ್ತೆ ಆರಂಭಿಸಿ ಐದು ದಿನ ಪಾದಯಾತ್ರೆ ನಡೆಸಲಾಗುತ್ತಿದೆ. ಕೊನೆಯ ದಿನ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾರೋಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಸದ್ಯ ಕೊರೊನಾ ಗೈಡ್ ಲೈನ್ಸ್ ಇಲ್ಲ. ಇನ್ನು ಮಹದಾಯಿ ಹೋರಾಟ ಆಮೇಲೆ ಹೇಳ್ತೀವಿ. ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದೆ. ನಾನು, ಡಿ.ಕೆ. ಶಿವಕುಮಾರ್ ಮತ್ತಿತರ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.
ಸಚಿವ ಈಶ್ವರಪ್ಪ ವಿವಾದಾತ್ಮಕ ಹೇಳಿಕೆಗೆ ಅವರನ್ನು ಸಂಪುಟದಿಂದ ವಜಾ ಮಾಡುವ ವರೆಗೂ ಸದನದಲ್ಲಿ ಅಹೋರಾತ್ರಿ ಹೋರಾಟ ಮುಂದುವರಿಸುತ್ತೇವೆ ಎಂದು ಕಿಡಿಕಾರಿದರು.
ಕರ್ನಾಟಕ ಸರ್ಕಾರವು ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಸಲುವಾಗಿ ಮೇಕೆದಾಟಿನಲ್ಲಿ ಅಣೆಕಟ್ಟು ಕಟ್ಟಲು ಮುಂದಾಗಿದೆ. ತಮಿಳುನಾಡು ಕೂಡಾ ತನ್ನ ರಾಜ್ಯದಲ್ಲಿ 2 ಜಲವಿದ್ಯುತ್ ಯೋಜನೆಗಳನ್ನು ರೂಪಿಸಿದೆ. ಆದರೆ ಕರ್ನಾಟಕದ ಮೇಕೆದಾಟು ಯೋಜನೆಗೆ ಮಾತ್ರ ತಮಿಳುನಾಡು ಅಡ್ಡಗಾಲು ಹಾಕುತ್ತಿದೆ. ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ 9 ಸಾವಿರ ಕೋಟಿ ರೂ. ಮೊತ್ತದ ಯೋಜನೆಗೆ ನ್ಯಾಯಾಲಯ ಸಮ್ಮತಿ ಸೂಚಿಸಿದೆ. ರಾಮನಗರ ಜಿಲ್ಲೆಯ ಒಂಟಿಗುಂಡ್ಲು ಬಳಿ ಅಣೆಕಟ್ಟು ನಿರ್ಮಿಸಲು ಉದ್ದೇಶಿಸಿರುವ
ಬೆಂಗಳೂರಿಗೆ 4.75 ಟಿಎಂಸಿ ಕುಡಿಯುವ ನೀರಿನ ಅಗತ್ಯತೆಗಾಗಿ 67.16 ಟಿಎಂಸಿ ಸಂಗ್ರಹ ಸಾಮರ್ಥ್ಯದ ಅಣೆಕಟ್ಟನ್ನು ಮೇಕೆದಾಟಿನಲ್ಲಿ ನಿರ್ಮಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಇದಕ್ಕೆ ತಮಿಳುನಾಡಿನ ಆಕ್ಷೇಪ ವ್ಯಕ್ತವಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ