ನಿಷೇಧಾಜ್ಞೆ ಉಲ್ಲಂಘಿಸಿ ಹಿಜಾಬ್‌ ಪ್ರತಿಭಟನೆ : ವಿದ್ಯಾರ್ಥಿನಿಯರ ಮೇಲೆ ಪ್ರಕರಣ ದಾಖಲಿಸಿದ ಪ್ರಾಂಶುಪಾಲರು

posted in: ರಾಜ್ಯ | 0

ತುಮಕೂರು: ನಿಷೇಧಾಜ್ಞೆ ಉಲ್ಲಂಘನೆ ಮಾಡಿದ ತುಮಕೂರಿನ ಎಂಪ್ರೆಸ್ ಕಾಲೇಜು ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಬುಧವಾರ ಹಾಗೂ ಗುರುವಾರ ಎಂಪ್ರೆಸ್ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ವಿಚಾರವಾಗಿ ಪ್ರತಿಭಟನೆ ನಡೆಸಿದ್ದರು ಹಾಗೂ ಪ್ರಾಂಶುಪಾಲರ ಜೊತೆ ವಾಗ್ವಾದಕ್ಕೆ ಇಳಿದಿದ್ದರು. ಈ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದಾರೆ.
ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗಲು ಅನುಮತಿ ಕೋರಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಇದು ಮೊದಲ ಎಫ್‌ಐಆರ್ ಆಗಿದ್ದು, ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಯಾರ ಹೆಸರನ್ನು ಉಲ್ಲೇಖಿಸದೆ 15 ವಿದ್ಯಾರ್ಥಿನಿಯರ ಮೇಲೆ ಎಫ್‌ಐಆರ್ ದಾಖಲಾಗಿದೆ. ತುಮಕೂರು ನಗರದ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: 32 ಶೈಕ್ಷಣಿಕ ಜಿಲ್ಲೆಗೆ ಎ ಗ್ರೇಡ್, ಮೊದಲನೇ ಸ್ಥಾನ ಹಂಚಿಕೊಂಡ 145 ವಿದ್ಯಾರ್ಥಿಗಳು
advertisement

ನಿಮ್ಮ ಕಾಮೆಂಟ್ ಬರೆಯಿರಿ