ವಿಜಯಪುರ: ಹಿಜಾಬ್ ವಿವಾದ ಇನ್ನೂ ತಣ್ಣಗಾಗುವ ಮೊದಲೆ ಈಗ ಸಿಂಧೂರ ವಿವಾದ ಉಂಟಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕಾಲೇಜಿನಲ್ಲಿ ಸಿಂಧೂರ ಕುಂಕುಮ ಇಟ್ಟುಕೊಂಡು ಬಂದಿದ್ದಕ್ಕೆ ಶಿಕ್ಷಕರು ವಿದ್ಯಾರ್ಥಿಗೆ ತರಗತಿ ಪ್ರವೇಶ ನಿರಾಕರಿಸಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಜಿಲ್ಲೆಯ ಇಂಡಿ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಣೆಗೆ ಕುಂಕುಮ ಹಚ್ಚಿಕೊಂಡು ಬಂದ ವಿದ್ಯಾರ್ಥಿಗೆ ಕುಂಕುಮ ತೆಗೆದು ತರಗತಿ ಪ್ರವೇಶಿಸುವಂತೆ ಉಪನ್ಯಾಸಕರು ತಾಕೀತು ಮಾಡಿದ್ದಾರೆ. ಇದಕ್ಕೆ ವಿದ್ಯಾರ್ಥಿ ಒಪ್ಪದಿದ್ದಾಗ ಕಾಲೇಜು ಪ್ರವೇಶ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ.
ಎಂದಿನಂತೆ ಕಾಲೇಜಿಗೆ ಬಂದ ಗಂಗಾಧರ ಬಡಿಗೇರ ಎಂಬ ವಿದ್ಯಾರ್ಥಿ ಹಣೆಗೆ ಸಿಂಧೂರ ಇಟ್ಟುಕೊಂಡು ಬಂದಿದ್ದ. ಇದನ್ನು ಗಮನಿಸಿದ ಕಾಲೇಜಿನ ದೈಹಿಕ ಉಪನ್ಯಾಸಕರು ತರಗತಿ ಪ್ರವೇಶಕ್ಕೆ ಅವಕಾಶ ಕೊಟ್ಟಿಲ್ಲ. ಈ ವೇಳೆ ಇವರಿಬ್ಬರ ನಡುವೆ ವಾಗ್ವಾದ ನಡೆದಿದೆ.
ಹಿಜಾಬ್ ಮತ್ತು ಕೇಸರಿ ಶಾಲು ಇದು ಡ್ರೆಸ್, ಅದುಬಿಟ್ಟು ಹಣೆಗೆ ಕುಂಕುಮ, ತಿಲಕ, ನಾಮ ಹಾಕಿಕೊಂಡು ಬರಬೇಡಿ ಎಂದರೆ ಹೇಗೆ ಎಂದು ವಿದ್ಯಾರ್ಥಿ ಪ್ರಶ್ನಿಸಿದ್ದಾನೆ. ಇದು ನಮ್ಮ ಪಾರಂಪರಿಕ ಸಾಂಸ್ಕೃತಿಕ ಗುರುತು ಸಿಂಧೂರ, ತಿಲಕಕ್ಕೆ ಏಕೆ ಅನುಮತಿ ನೀಡುತ್ತಿಲ್ಲ ಎಂದು ವಿದ್ಯಾರ್ಥಿವಾದಿಸಿದ್ದಾನೆ. ಆಗ ಪೊಲೀಸರು ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದು ವರದಿಯಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ