ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಖಾಸಗಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ ಯಶವಂತಪುರ ರೈಲ್ವೆ ಟ್ರಾಕ್‍ನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಆತ್ಮಹತ್ಯೆ ಮಾಡಿಕೊಂಡವಳನ್ನು 9ನೇ ತರಗತಿ ವಿದ್ಯಾರ್ಥಿನಿ ರಮ್ಯಾ ಮೂರ್ತಿ ಎಂದು ಗುರುತಿಸಲಾಗಿದ್ದು, ಟಿ.ದಾಸರಹಳ್ಳಿಯ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಳು.ರಮ್ಯಾ ಶಾಲೆಗೆ ಸ್ನಾಕ್ಸ್ ತೆಗೆದುಕೊಂಡು ಹೋಗಿರುವ ವಿಚಾರ ಶಾಲೆ ಶಿಕ್ಷಕರ ಗಮನಕ್ಕೆ ಬಂದು ಪ್ರಾಂಶುಪಾಲರಿಗೆ ಗೊತ್ತಾಗಿ ವಿದ್ಯಾರ್ಥಿನಿ ಪೋಷಕರಿಗೆ ಕರೆದು ಎಚ್ಚರಿಕೆ ನೀಡಲಾಗಿತ್ತು ಎನ್ನಲಾಗಿದೆ.
ಶಾಲಾ ಆಡಳಿತ ಮಂಡಳಿ ವರ್ತನೆಯಿಂದ ಬೇಸರಗೊಂಡ ರಮ್ಯಾ ತಾಯಿ ಶಾಲೆ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದರಂತೆ. ತಾಯಿ ಶಾಲೆ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದರಿಂದ ಶಾಲೆಯಲ್ಲಿ ವಿದ್ಯಾರ್ಥಿನಿ ರಮ್ಯಾಳಿಗೆ ಕಿರುಕುಳ ಕೊಡುತ್ತಿದ್ದರು ಎಂಬ ಕಾರಣಕ್ಕೆ ಮನನೊಂದು ಗುರುವಾರ ಮುಂಜಾನೆ ವಾಕಿಂಗ್ ಹೋಗಿ ಬರುತ್ತೇನೆಂದು ಹೇಳಿ ಹೋಗಿ ರೈಲಿಗೆ ತಲೆಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ.
ರಮ್ಯಾ ಮೂರ್ತಿ ಸಾವಿಗೂ ಮುನ್ನ ಬರೆದಿರುವ ಡೆತ್ ನೋಟ್‍ನಲ್ಲಿ Dear school marks is not everything ಎಂದು ಬರೆದಿದ್ದಾಳೆ. ಅಲ್ಲದೆ I HATE ಪ್ರಿನ್ಸಿಪಾಲ್ ಹೆಸರು ಬರೆದು, ನಂತರ ಒಂದಷ್ಟು ಸಹಪಾಠಿ ವಿದ್ಯಾರ್ಥಿಗಳ ಹೆಸರು ಬರೆದು ಐ ಹೇಟ್ ಯು ಆಲ್ ಎಂದು ಕೆಳಗೆ ಬರೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ