ಸಚಿವ ಈಶ್ವರಪ್ಪ ಹೇಳಿಕೆಗೆ ಸದನದಲ್ಲಿ ಮುಂದವರಿದ ಕಾಂಗ್ರೆಸ್‌ ಪ್ರತಿಭಟನೆ: ಕಲಾಪವನ್ನು ಸೋಮವಾರ ಬೆಳಗ್ಗೆ 11ಕ್ಕೆ ಮುಂದೂಡಿದ ಸ್ಪೀಕರ್

ಬೆಂಗಳೂರು: ವಿಧಾನಸಭೆಯಲ್ಲಿ ಕಾಂಗ್ರೆಸ್ ನಿಂದ ಅಹೋರಾತ್ರಿ ಧರಣಿ, ಗದ್ದಲ ಮುಂದುವರಿದಿರುವ ಹಿನ್ನೆಲೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯ ವಿಧಾನಸಭೆ ಅಧಿವೇಶನದ ಕಲಾಪವನ್ನು ಸೋಮವಾರ ಬೆಳಗ್ಗೆ 11ಕ್ಕೆ ಮುಂದೂಡಿದ್ದಾರೆ.

ಮುಂದೊಂದು ದಿನ ಕೆಂಪುಕೋಟೆಯಲ್ಲಿ ಭಗವಾಧ್ವಜ ಹಾರಿಸಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಈಶ್ವರಪ್ಪ ವಜಾಗೊಳಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಶುಕ್ರವಾರ ಕೂಡ ಕಾಂಗ್ರೆಸ್ ಧರಣಿ ಮುಂದುವರೆಸಿದೆ. ಧರಣಿ ಹಿಂಪಡೆಯುವ ನಿಟ್ಟಿನಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದಲ್ಲಿ ಶುಕ್ರವಾರ ನಡೆದ ಸಂಧಾನ‌ ಸಭೆ ನಡೆಸಿದರೂ ಅದು ವಿಫಲವಾಯಿತು. ಇಂದು, ಶುಕ್ರವಾರ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಶಾಸಕರು ಸದನದ ಬಾವಿಗಿಳಿದು ತಮ್ಮ ಪ್ರತಿಭಟನೆ ಮುಂದುವರಿಸಿದರು. ಸ್ಪೀಕರ್ ಹಲವು ಸಲ ಮನವಿ ಮಾಡಿದರು. ಆದರೆ ಕಾಂಗ್ರೆಸ್ ಶಾಸಕರು ಅವರ ಮಾತನ್ನು ಕೇಳಲಿಲ್ಲ. ಈ ಹಿನ್ನೆಲೆ ಸೋಮವಾರ ಬೆಳಗ್ಗೆ 11ಕ್ಕೆ ಕಲಾಪ ಮುಂದೂಡಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement