ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳ ನೇಮಕಾತಿಯಲ್ಲಿ ಅನ್ಯಾಯದ ದೂರು: ಪಿಎಸ್ಐ ನೇಮಕಾತಿಗೆ ತಡೆ

posted in: ರಾಜ್ಯ | 0

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಪಿ.ಎಸ್.ಐ. ನೇಮಕಾತಿಯಲ್ಲಿ ಅನ್ಯಾಯವಾಗಿದೆ ಎಂದ ಇಲ್ಲಿನ ಜನಪ್ರತಿನಿಧಗಳ ಮನವಿ ಮೇರೆಗೆ ಪ್ರಸ್ತುತ ನೇಮಕಾತಿಗೆ ತಡೆ ನೀಡಲಾಗಿದೆ. ಈ ಕುರಿತು ಅಧ್ಯಯನಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಶನಿವಾರ ಕಲಬುರಗಿಯ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಅತಿಥಿಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮಿತಿಯಲ್ಲಿ ಗೃಹ ಸಚಿವಾಲಯದ ಕಾರ್ಯದರ್ಶಿ, ಡಿ.ಪಿ.ಎ.ಆರ್. ಕಾರ್ಯದರ್ಶಿ ಹಾಗೂ ಡಿ.ಜಿ.ಪಿ ಅವರು ಸಹ ಇರಲಿದ್ದಾರೆ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ 371ಜೆ ವಿಶೇಷ ವಿಶೇಷ ಸ್ಥಾನಮಾನದ ಕಾಯ್ದೆ ಮತ್ತು ಆದೇಶಗಳನ್ನು ಸಂಪೂರ್ಣವಾಗಿ ಅಧ್ಯಯನ ಮಾಡಲು ಸಮಿತಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಹಿಜಾಬ್ ಪ್ರಕರಣ ಕುರಿತ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕುರಿತು ರಾಜ್ಯದ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶ ಪಾಲನೆ ಮಾಡಲಾಗುತ್ತಿದೆ. ಕೋರ್ಟ್ ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಈ ಪ್ರಕರಣದಲ್ಲಿ ಬೆರಳಣಿಕೆ ಕಡೆ ಅನಗತ್ಯ ಗೊಂದಲ ಮೂಡಿಸಲಾಗುತ್ತಿದೆ. ಕೆಲವು ದುಷ್ಟಶಕ್ತಿಗಳು ಈ ವಿಷಯದಲ್ಲಿ ಕಾರ್ಯನಿರ್ವಹಿಸುತ್ತಿರುವುದನ್ನು ಸರ್ಕಾರವು ಸೂಕ್ಷ್ಮವಾಗಿ ಗಮನಿಸಿದೆ. ಇಂತವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಶಿವಮೊಗ್ಗ, ಉಡುಪಿಯಲ್ಲಿ ಇದೇ ವಿಷಯದಲ್ಲಿ ಪ್ರಕರಣ ದಾಖಲಿಸಲಾಗಿದೆ. ಶಾಲೆಗೆ ಹೋಗುವ ಮಕ್ಕಳ ನಡುವೆ ವಿಷ ಬೀಜ ಬಿತ್ತುವ ಕೆಲಸವನ್ನೂ ಯಾರು ಮಾಡಬಾರದು ಎಂದರು.

ಓದಿರಿ :-   ನಾಳೆ ಸಚಿವಾಲಯ ಬಂದ್‌ಗೆ ಕರೆ ನೀಡಿದ ನೌಕರರು; ಪ್ರತಿಭಟನೆ ಕಾನೂನುಬಾಹಿರ ಎಂದ ಸರ್ಕಾರ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ