ದಕ್ಷಿಣ ಕನ್ನಡದಲ್ಲಿ ಶಾಲಾ-ಕಾಲೇಜುಗಳ ಸುತ್ತ ನಿಷೇಧಾಜ್ಞೆ ಫೆಬ್ರವರಿ 26ರ ವರೆಗೆ ವಿಸ್ತರಣೆ

ಮಂಗಳೂರು: ಕರ್ನಾಟಕದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ನಿಷೇಧಾಜ್ಞೆಗಳನ್ನು ಫೆಬ್ರವರಿ 26 ರ ವರೆಗೆ ವಿಸ್ತರಿಸಿದೆ.
ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಉದ್ವಿಗ್ನತೆ ಉಂಟಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯ ಶಾಲಾ-ಕಾಲೇಜುಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಫೆ.19ರ ಸಂಜೆ 6ರಿಂದ ಫೆ.26ರ ಸಂಜೆ 6ರವರೆಗೆ ಆದೇಶ ಅನ್ವಯವಾಗಲಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ನಿಮ್ಮ ಕಾಮೆಂಟ್ ಬರೆಯಿರಿ

advertisement