ಈಶ್ವರಪ್ಪ ವಿವಾದಾತ್ಮಕ ಹೇಳಿಕೆ : ಅಹೋರಾತ್ರಿ ಧರಣಿ ಮುಂದುವರಿಕೆ, ರಾಜ್ಯಾದ್ಯಂತ ಹೋರಾಟ-ಡಿಕೆಶಿ

ಬೆಂಗಳೂರು: ರಾಷ್ಟ್ರ ಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಂಪುಟದಿಂದ ಸಚಿವ ಕೆ.ಎಸ್ ಈಶ್ವರಪ್ಪ ಅವರ ವಜಾಕ್ಕೆ ಆಗ್ರಹಿಸಿ ಸದನದ ಹೊರಗೂ ಹೋರಾಟ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.
ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಸದನದಲ್ಲಿ ಅಹೋರಾತ್ರಿ ಧರಣಿ ಶನಿವಾರವೂ ಮುಂದುವರಿಯಲಿದೆ. ಅಲ್ಲದೆ, ಸೋಮವಾರದಿಂದ ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತದೆ. ಮುಂದಿನ ದಿನಗಳಲ್ಲಿ ಹಳ್ಳಿ ಹಳ್ಳಿಗೂ ಹೋರಾಟ ತಲುಪಿಸುತ್ತೇವೆ ಎಂದು ಮಾಹಿತಿ ನೀಡಿದರು.
ಸೋಮವಾರ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಈಶ್ವರಪ್ಪ ವಜಾಗೊಳಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಲಿದ್ದಾರೆ. ರಾಷ್ಟ್ರ ಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸಿಲ್ಲ. ಆದರೆ ಅವರ ವಿರುದ್ಧ ಪ್ರತಿಭಟನೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣವನ್ನು ಜನತಾ ನ್ಯಾಯಾಲಯದ ಮುಂದೆ ತೆಗೆದುಕೊಂಡು ಹೋಗುತ್ತೇವೆ, ನಮ್ಮ ಮೇಲೆ ಪ್ರಕರನ ದಾಖಲಿಸಲಿ ಎಂದು ಸವಾಲು ಹಾಕಿದರು. .
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ಪಕ್ಷದ ಕೈಗೊಂಬೆ ಆಗಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿಲ್ಲ. ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿ ಏನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಒಂದು ಕಡೆಯಲ್ಲಿ ಧರಣಿ ಮುಂದುವರಿಸುತ್ತೇವೆ. ಅದರ ಜೊತೆಗೆ ಮೇಕೆದಾಟು ಪಾದಯಾತ್ರೆ ಫೆ. 27 ರಿಂದ ಆರಂಭವಾಗಲಿದೆ. ಪಾದಯಾತ್ರೆಗೆ ನಾನು ತಯಾರಿ ಮಾಡುತ್ತಿದ್ದೇನೆ. ಬೆಂಗಳೂರು ನಗರದ ಜನರಿಗಾಗಿ, ರೈತರಿಗೆ ಹೋರಾಟ ನಡೆಸುತ್ತೇವೆ ಎಂದರು.

ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement