ಮೀನುಗಾರರ ಬಲೆಗೆ ಬಿದ್ದ ಅಪರೂಪದ ಹಾರುವ ಮೀನು..!

ಮಂಗಳೂರು : ಅಪರೂಪದ ಎರಡು ಹಾರುವ ಮೀನುಗಳು ಮಂಗಳೂರಿನ ಮೀನುಗಾರರ ಬಲೆಗೆ ಬಿದ್ದಿದ್ದು, ಇದನ್ನು ಆಂಗ್ಲ ಭಾಷೆಯಲ್ಲಿ ಫ್ಲೈಯಿಂಗ್‌ ​ ಫಿಶ್​ ಎಂದು ಕರೆಯುತ್ತಾರೆ.

ಮಂಗಳೂರಿನ ಮೀನುಗಾರರ ಬಲೆಗೆ ಅಪರೂಪದ ಹಾರುವ ಎರಡು ಮೀನುಗಳು ಬಿದ್ದಿವೆ. ಎರಡು ದಿನ ಹಿಂದೆ ದಕ್ಕೆಗೆ ಬಂದಿರುವ ಮೀನಿನ ರಾಶಿಯಲ್ಲಿ ಎರಡು ಹಾರುವ ಮೀನು ಸಿಕ್ಕಿವೆ ಎಂದು ಹೇಳಲಾಗಿದೆ. ತುಳುವಲ್ಲಿ ಪಕ್ಕಿಮೀನ್​ ಎಂದು ಇವನ್ನು ಕರೆಯುತ್ತಾರೆ.
ಈ ಹಾರುವ ಮೀನು ಹೆಚ್ಚಾಗಿ ಆಳ ಸಮುದ್ರದಲ್ಲಿರುವ ಮತ್ಸ್ಯ ಪ್ರಭೇದ. ಇವುಗಳಿಗೆ ಹಕ್ಕಿಯಂತೆಯೇ ರೆಕ್ಕೆಗಳಿರುತ್ತವೆ. ರೆಕ್ಕೆ ಹಾಗೂ ದೇಹದ ಎಲುಬುಗಳ ಭಿನ್ನ ರಚನೆಯಿಂದ ನೀರಿನಿಂದ ಮೇಲೆ ಜಿಗಿದು ಕೆಲ ಹೊತ್ತು ಹಕ್ಕಿಗಳಂತೆಯೇ ಹಾರುವ ಸಾಮರ್ಥ್ಯವನ್ನು ಉವುಗಳು ಹೊಂದಿವೆ.

ಸುಮಾರು 15ರಿಂದ 45 ಸೆಂ.ಮೀ. ಉದ್ದವಿರುವ ಈ ಮೀನುಗಳು ಬಲೆಗೆ ಬೀಳುವುದು ಅಪರೂಪ. ಇತರ ಮೀನುಗಳಿಗೆ ಹೋಲಿಸಿದರೆ ಹಾರುವ ಮೀನುಗಳು ಹೆಚ್ಚು ರುಚಿಕರವಾಗಿರುತ್ತದೆ. ಆದರೆ, ಅದನ್ನೇ ಹಿಡಿಯುವ ಕ್ರಮ ಈ ಭಾಗದಲ್ಲಿ ಕಡಿಮೆಯಂತೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement