ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲುವಿಕೆಯಿಂದ ನೊಂದಿದ್ದ ಅಶ್ವಿನಿ ಅವರಿಗೆ ಈಗ ಮತ್ತೊಂದು ಆಘಾತ ಉಂಟಾಗಿದೆ. ಅಶ್ವಿನಿ ತಂದೆ ಭಾಗಮನೆ ರೇವನಾಥ್ (78) ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನ ಹೊಂದಿದ್ದಾರೆ.
ಪುನೀತ್ ರಾಜ್ಕುಮಾರ್ ಅವರ ಮಾವ ಭಾಗಮನೆ ರೇವನಾಥ್ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅಶ್ವಿನಿ ಪುನೀತ್ ರಾಜ್ಕುಮಾರ್ ತಂದೆ ಭಾಗಮನೆ ರೇವನಾಥ್ ಅವರಿಗೆ 20 ವರ್ಷಗಳ ಹಿಂದೆ ಅವರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಲಾಗಿತ್ತು. ಪುನೀತ್ ರಾಜ್ಕುಮಾರ್ ನಿಧನದ ನಂತರ ಅವರು ತೀವ್ರ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಕೆಲವೇ ತಿಂಗಳ ಹಿಂದೆ ಪುನೀತ್ ರಾಜ್ಕುಮಾರ್ ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದು ಅಶ್ವಿನಿ ಅವರಿಗೆ ತೀವ್ರ ಆಘಾತ ಉಂಟು ಮಾಡಿತ್ತು. ಆ ನೋವು ಇನ್ನೂ ಹಸಿಯಾಗಿ ಇರುವಾಗಲೇ ಮತ್ತೊಂದು ಶಾಕ್ ಎದುರಾಗಿದೆ.
ಹೆಚ್ಎಐ ಮುಖ್ಯ ಇಂಜಿನಿಯರ್ ಆಗಿ ಕೆಲಸ ಮಾಡಿದ್ದ ಬಿ.ರೇವನಾಥ್ ಅವರು ಚಿಕ್ಕಮಗಳೂರು ತಾಲೂಕಿನ ಬಾಗೇಮನೆಯವರಾಗಿದ್ದರು. ಕಳೆದ 40 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು.
ಅಪ್ಪುವಿನಂತೆ ಮಾವ ರೇವಾನಾಥ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ರೇವಾನಾಥ್ ನಿಧನದ ನಂತರ ಕಣ್ಣಿನ ದಾನಕ್ಕೆ ಕುಟುಂಬಸ್ಥರು ನಿರ್ಧರಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ