ಶಿರಸಿ: ಯಕ್ಷಗಾನ ಪ್ರಸಂಗಕರ್ತೃ ಡಿ.ಎಸ್. ಶ್ರೀಧರರಿಗೆ ಪಾರ್ತಿಸುಬ್ಬ ಪ್ರಶಸ್ತಿ-ಹಲವು ಸಾಧಕರಿಗೆ ಯಕ್ಷಸಿರಿ ಪ್ರಶಸ್ತಿ ಪ್ರದಾನ

posted in: ರಾಜ್ಯ | 0

ಶಿರಸಿ: ಇಲ್ಲಿನ ಟಿ.ಆರ್.ಸಿ. ಸಭಾಂಗಣದಲ್ಲಿ ರಾಜ್ಯ ಯಕ್ಷಗಾನ ಅಕಾಡೆಮಿಯು ಭಾನುವಾರ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ 2020ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ, ಯಕ್ಷಗಾನ ಅಕಾಡೆಮಿಯ ಗೌರವ ಪ್ರಶಸ್ತಿ, ಯಕ್ಷ ಸಿರಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ಯಕ್ಷಗಾನದ ಅರ್ಥಧಾರಿ ಹಾಗೂ ಪ್ರಸಂಗಕರ್ತೃ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ದರೇಮನೆಯ ನಿಟ್ಟೂರಿನ ಡಿ.ಎಸ್.ಶ್ರೀಧರ ಅವರು ಈ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಭಾಜನರಾದರು. ಪ್ರಶಸ್ತಿ ಮೊತ್ತ ಒಂದು ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.
ರೂಪಾಂತರದ ನಡುವೆಯೂ ಕನ್ನಡ ಸಂಸ್ಕೃತಿಯ ಮೂಲವಾದ ಈ ಕಲೆ ಬೆಳೆಯುತ್ತಿದೆ. ಕಲಾವಿದರು, ಪ್ರೇಕ್ಷಕರು ಇದರತ್ತ ಇನ್ನಷ್ಟು ಒಲವು ಬೆಳೆಸಿಕೊಳ್ಳಬೇಕು ಎಂದ ಅವರು, ಸರ್ಕಾರ ಯಕ್ಷಗಾನದ ಮನೆತನದ ದತ್ತಿ ಪ್ರಶಸ್ತಿ ನೀಡಲು ಕ್ರಮವಹಿಸಬೇಕು. ಯಕ್ಷಗಾನ ವಿಶ್ವಕೋಶ ತರಲು ಕ್ರಮವಹಿಸಲಾಗುತ್ತಿದ್ದು, ಭವಿಷ್ಯದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿಸಲೂ ಕೋರಲಾಗಿದೆ ಎಂದರು.
ಅಲ್ಲದೆ, ತಲಾ 25 ಸಾವಿರ ರೂ. ನಗದು ಒಳಗೊಂಡ ಯಕ್ಷ ಸಿರಿ ವಾರ್ಷಿಕ ಪ್ರಶಸ್ತಿಯನ್ನು ಹರಿನಾರಾಯಣ ಬೈಪಾಡಿತ್ತಾಯ, ಗೋಪಾಲ ಆಚಾರ್ಯ ತೀರ್ಥಹಳ್ಳಿ, ಬೇಲ್ತೂರು ರಮೇಶ, ಆವರ್ಸೆ ಶ್ರೀನಿವಾಸ ಮಡಿವಾಳ ಹಾಗೂ ಸಂಜಯ ಕುಮಾರ ಶೆಟ್ಟಿ, ಶಿರಸಿಯ ಎಂ.ಆರ್. ಹೆಗಡೆ ಕಾನಗೋಡ, ಸುಬ್ರಹ್ಮಣ್ಯ ಧಾರೇಶ್ವರ, ವಿಟ್ಲ ಶಂಭು ಶರ್ಮ, ಬರಗೂರಿನ ಹನುಮಂತರಾಯಪ್ಪ ಮತ್ತು ಕೋಲಾರ ವಕ್ಕಲೇರಿಯ ಎ.ಎಂ. ಮುಳವಾಗಲಪ್ಪ ಅವರಿಗೆ ನೀಡಲಾಯಿತು.
ಅಕಾಡೆಮಿಯ ವಾರ್ಷಿಕ ಗೌರವ ಪುರಸ್ಕಾರವನ್ನು ತಲಕಳ ದಿ.ಕೆ.ತಿಮ್ಮಪ್ಪ ಗುಜರನ್ (ಮರಣೋತ್ತರ) ಅವರ ಪರವಾಗಿ ಪತ್ನಿ ಗುಲಾಬಿ ಗುಜರನ್, ಶಿರಸಿಯ ಡಾ.ವಿಜಯ ನಳಿನಿ ರಮೇಶ, ಹರಪನಹಳ್ಳಿಯ ಬಿ. ಪರಶುರಾಮ ಅವರಿಗೆ ಅಕಾಡೆಮಿ ವಾರ್ಷಿಕ ಗೌರವ ಪುರಸ್ಕಾರ ನೀಡಲಾಯಿತು. ಯಕ್ಷಗಾನ ಗುರು ಹರಿನಾರಾಯಣ ಬೈಪಾಡಿತ್ತಾಯ, ಗೋಪಾಲ ಆಚಾರ್ಯ ತೀರ್ಥಹಳ್ಳಿ, ಬೇಲ್ತೂರು ರಮೇಶ, ಆವರ್ಸೆ ಶ್ರೀನಿವಾಸ ಮಡಿವಾಳ ಹಾಗೂ ಸಂಜಯ ಕುಮಾರ ಶೆಟ್ಟಿ, ಎಂ.ಆರ್. ಹೆಗಡೆ ಕಾನಗೋಡ, ಸುಬ್ರಹ್ಮಣ್ಯ ಧಾರೇಶ್ವರ, ವಿಟ್ಲ ಶಂಭು ಶರ್ಮ, ಬರಗೂರಿನ ಹನುಮಂತ ರಾಯಪ್ಪ ಮತ್ತು ಕೋಲಾರ ವಕ್ಕಲೇರಿಯ ಎ.ಎಂ. ಮುಳವಾಗಲಪ್ಪ ಅವರಿಗೆ ಪ್ರದಾನ ಮಾಡಲಾಯಿತು.
ಅಕಾಡೆಮಿ ಅಧ್ಯಕ್ಷ ಡಾ.ಜಿ.ಎಲ್.ಹೆಗಡೆ ಹಾಗೂ ಇತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು. ನಂತರ ಮಾತನಾಡಿದ ಜಿ.ಎಲ್.ಹೆಗಡೆ, ನಿತ್ಯ ಯಕ್ಷಗಾನ ಪ್ರದರ್ಶನ ನಡೆಯಬೇಕು. ಗುಂಡಬಾಳದಂಥ ಯಕ್ಷಗಾನ ಕೇಂದ್ರ ರಾಜ್ಯಾದ್ಯಂತ ವಿಸ್ತರಿಸಬೇಕು ಎಂದರು.
ರೂಪಾಂತರದ ನಡುವೆಯೂ ಕನ್ನಡ ಸಂಸ್ಕೃತಿಯ ಮೂಲವಾದ ಈ ಕಲೆ ಬೆಳೆಯುತ್ತಿದೆ. ಸರ್ಕಾರ ಯಕ್ಷಗಾನದ ಮನೆತನದ ದತ್ತಿ ಪ್ರಶಸ್ತಿ ನೀಡಲು ಕ್ರಮವಹಿಸಬೇಕು. ಯಕ್ಷಗಾನ ವಿಶ್ವಕೋಶ ತರಲು ಪ್ರಯತ್ನಿಸಲಾಗುತ್ತಿದೆ ಎಂದರು.
ಅಕಾಡೆಮಿ ಹಿರಿಯ ಸದಸ್ಯ ಜಿ.ಎಸ್.ಭಟ್ಟ, ನಗರಸಭೆ ಉಪಾಧ್ಯಕ್ಷೆ ವೀಣಾ ಶೆಟ್ಟಿ, ಅಕಾಡೆಮಿ ಸದಸ್ಯೆ ನಿರ್ಮಲಾ ಹೆಗಡೆ, ಆರತಿ ಪಟ್ರಮೆ ಇತರರಿದ್ದರು. ಅಕಾಡೆಮಿ ಸದಸ್ಯ ಕದ್ರಿ ನವನೀತ ಶೆಟ್ಟಿ ನಿರೂಪಿಸಿದರು. ರಜಿಸ್ಟ್ರಾರ್ ಎಸ್.ಎಚ್.ಶಿವರುದ್ರಪ್ಪ ಪ್ರಾಸ್ತಾವಿಕ ಮಾತನಾಡಿದರು.

ಓದಿರಿ :-   ರಾಜ್ಯದಲ್ಲಿ ಧಾರಾಕಾರ ಮಳೆ: ಕೆಲವೆಡೆ ಶಾಲೆಗಳಿಗೆ ರಜೆ ಘೋಷಣೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ