ಕಾಸರಗೋಡು(ಕೇರಳ): ಕಾಸರಗೋಡು ಬಿಜೆಪಿಯಲ್ಲಿ ಅಸಮಧಾನ ಭುಗಿಲೆದ್ದಿದ್ದು ಕಾರ್ಯಕರ್ತರು ಪಕ್ಷದ ಕಚೇರಿಗೆ ಮುತ್ತಿಗೆ ಹಾಕಿ ಕಚೇರಿಗೆ ಬೀಗ ಜಡಿದ ಘಟನೆ ಇಂದು, ಭಾನುವಾರ ನಡೆದಿದೆ.
ಕುಂಬಳೆ ಗ್ರಾಮ ಪಂಚಾಯತ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಬದ್ಧ ರಾಜಕೀಯ ವೈರಿಗಳಾದ ಬಿಜೆಪಿ ಮತ್ತು ಸಿಪಿಎಂ ಅಪವಿತ್ರ ಮೈತ್ರಿ ಮಾಡಿಕೊಂಡಿರುವುದು ಬಿಜೆಪಿಯಲ್ಲಿ ಅಸಮಾಧಾನಕ್ಕೆ ಎಡೆ ಮಾಡಿಕೊಟ್ಟಿದೆ. . ಹಲವು ಬಾರಿ ರಾಜ್ಯ ನಾಯಕರಿಗೆ ಈ ಬಗ್ಗೆ ದೂರು ಸಲ್ಲಿಸಿದ್ದರೂ ಈ ಬಗ್ಗೆ ಗಮನ ಹರಿಸಿರಲಿಲ್ಲ. ಅಲ್ಲದೆ, ಇಷ್ಟು ವರ್ಷದಿಂದ ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಲಾಗುತ್ತಿದ್ದು ಎಂಬ ಅಸಮಾಧಾನವೂ ಇದರೊಟ್ಟಿಗೆ ಸೇರಿದೆ ಎನ್ನಲಾಗಿದೆ. ಅನೇಕ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಸಮಸ್ಯೆ ಪರಿಹರಿಸುವ ತನಕ ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಪಕ್ಷದ ನಾಯಕರ ನಿಲುವಿನ ವಿರುದ್ಧ ಕೆಲ ಪದಾಧಿಕಾರಿಗಳು ಹಾಗೂ ಮುಖಂಡರು ಅಸಮಾಧಾನಗೊಂಡಿದ್ದು , ದಿನಗಳ ಹಿಂದೆ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಪಿ . ರಮೇಶ್ ರಾಜೀನಾಮೆ ನೀಡಿದ್ದರು.ಇದರ ಬೆನ್ನಿಗೆ ಕೆಲ ಪದಾಧಿಕಾರಿಗಳು ರಾಜಿನಾಮೆಗೆ ಮುಂದಾಗಿದ್ದರು ಎನ್ನಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ