ಸಿನಿಮಾದಲ್ಲಿ ನಟಿಸಿದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ..!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೊತ್ತ ಮೊದಲ ಬಾರಿಗೆ ಸಿನೆಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ.

ತನುಜಾ ಎಂಬ ಚಿತ್ರಕ್ಕೆ ಬಣ್ಣ ಹಚ್ಚುವ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರೊ ಹೊಡೆದಿದ್ದಾರೆ.
ಈ ಹಿಂದೆ ಅವರೇ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ತನುಜಾ ಎಂಬ ಹುಡುಗಿ ಕೋವಿಡ್ ಕಾರಣದಿಂದ ನೀಟ್ ಪರೀಕ್ಷೆ ಬರೆಯಲಾಗದೆ ತನ್ನ ಅಸಹಾಯಕತೆ ತೋಡಿಕೊಂಡಿದ್ದಳು. ಆಗ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ ಈಶ್ವರ ಅವರ ಸಹಕಾರದಿಂದ ಪರೀಕ್ಷೆ ಬರೆದು ನೀಟ್ ಪರೀಕ್ಷೆ ಬರೆದು ಪಾಸಾಗಿದ್ದು ಗಮನ ಸೆಳೆದಿತ್ತು.
ಪರೀಕ್ಷೆ ಬರೆಯಲು ಸುಮಾರು 350ಕಿಮೀ ದೂರ ಪ್ರಯಾಣ ಮಾಡಿ ಬಂದು ಪರೀಕ್ಷೆ ಬರೆದಿದ್ದಳು. ಇದನ್ನೇ ಒನ್‌ಲೈನ್ ಕತೆಯಾಗಿಸಿಕೊಂಡು ಹರೀಶ್ ಎಂ.ಡಿ ಹಳ್ಳಿಯವರು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಇದರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಪಾತ್ರವನ್ನೇ ನಿರ್ವಹಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಚಿತ್ರ ತಂಡ ದೃಢಪಡಿಸಿಲ್ಲ. ಶನಿವಾರ ಮೊದಲ ದಿನ ಅವರ ಭಾಗದ ಚಿತ್ರೀಕರಣ ನಡೆದಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.
ರಾಜಕೀಯ ನಾಯಕನಾಗಿ ಯಡಿಯೂರಪ್ಪ ಅವರನ್ನು ನೋಡಿರುವ ರಾಜ್ಯದ ಜನತೆಗೆ ಅವರು ಚಲನಚಿತ್ರದಲ್ಲಿ ಹೇಗೆ ಕಾಣಿಸುತ್ತಾರೋ ಎಂಬ ಕುತೂಹಲ ಇದ್ದೇ ಇರುತ್ತದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದಲ್ಲಿ ಅಭಿನಯಿಸಿದ್ದ ಸಪ್ತ ಪಾವೂರು ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದು ಪತ್ರಕರ್ತ ವಿಶ್ವೇಶ್ವರ ಸಹ ಅಭಿನಯಸುತ್ತಿದ್ದಾರೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಕೆಪಿಎಸ್‌ಸಿ ಹಗರಣ; ಐಎಎಸ್‌ ಅಧಿಕಾರಿ ಜ್ಞಾನೇಂದ್ರಕುಮಾರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸರ್ಕಾರದ ಅನುಮತಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement