ಭಜರಂಗ ದಳದ ಕಾರ್ಯಕರ್ತನ ಹತ್ಯೆ: ಶಿವಮೊಗ್ಗದಲ್ಲಿ ಕಲ್ಲು ತೂರಾಟ, ಬೈಕ್‌ಗಳಿಗೆ ಬೆಂಕಿ

posted in: ರಾಜ್ಯ | 0

ಶಿವಮೊಗ್ಗ: ಭಾನುವಾರ ರಾತ್ರಿ ಹತ್ಯೆಯಾದ ಭಜರಂಗ ದಳದ ಕಾರ್ಯಕರ್ತ ಹರ್ಷ ಮೃತದೇಹದ ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಮೆಗ್ಗಾನ್ ಆಸ್ಪತ್ರೆಯಿಂದ ದೇಹವನ್ನು ಹಸ್ತಾಂತರಿಸಲಾಗಿದೆ.

ಅವರ ಪಾರ್ಥಿವ ಶರೀರದ ಮೆರವಣಿಗೆ ಸಂದರ್ಭದಲ್ಲಿ ಹಲವೆಡೆ ಕಲ್ಲು ತೂರಾಟ ನಡೆದ ಬಗ್ಗೆ ವರದಿಯಾಗಿದೆ. ಕೆಲವಡೆ ಬೈಕ್ ಗಳಿಗೆ ಬೆಂಕಿ ಹಚ್ಚಿಲಾಗಿದೆ ಹಾಗೂ ಕಲ್ಲು ತೂರಿ ಕಾರಿನ ಗಾಜುಗಳನ್ನು ಪುಡ ಮಾಡಲಾಗಿದೆ ಎಂದು ವರದಿಯಾಗಿದ್ದು, ಕಾರುಗಳ ಗ್ಲಾಸ್ ಗಳನ್ನು ಪುಡಿ ಪುಡಿ ನಗರದಲ್ಲಿ ಉದ್ವಿಗ್ನತೆ ಪರಿಸ್ಥಿತಿ ಇದೆ.

ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಪಾರ್ಥಿವ ಶರೀರದ ಮೆರವಣಿಗೆ ಅವರ ಮನೆ ಇರುವ ಬಸವನ ಬೀದಿಯ ವರೆಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಈ ವೇಳೆ ಮನೆಗಳು, ವಾಹನಗಳ ಮೇಲೆ ಉದ್ರಿಕ್ತ ಗುಂಪಿನಿಂದ ಕಲ್ಲು ತೂರಾಟ ನಡೆದಿದ್ದು, ರಸ್ತೆಗಳಲ್ಲಿ ನಿಲ್ಲಿಸಿದ್ದ ಕೆಲವು ಬೈಕ್ ಗಳಿಗೆ ಬೆಂಕಿ ಹಚ್ಚಲಾಗಿದೆ ಹಾಗೂ ಕಾರುಗಳ ಗ್ಲಾಸ್ ಗಳು ಕಲ್ಲೇಟಿನಿಂದ ಪುಡಿಯಾಗಿವೆ ಎಂದು ವರದಿಗಳು ತಿಳಿಸಿವೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಐವರು ಆರೋಪಿಗಳ ಬಗ್ಗೆ ಸುಳಿವು ದೊರೆತಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದು, ಪೊಲೀಸರು ಈಗಾಗಲೇ ಒಬ್ಬನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಓದಿರಿ :-   ರಾಜ್ಯಸಭೆ ಅಥವಾ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವೆ ಯಾವುದೇ ಮೈತ್ರಿಯಿಲ್ಲ: ಸಿದ್ದರಾಮಯ್ಯ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ