ಹಿಜಾಬ್‌ ವಿವಾದ: ಎಲ್ಲ ಧರ್ಮಗಳ ವಿದ್ಯಾರ್ಥಿಗಳು ಕಡ್ಡಾಯವಾಗಿ ಶಾಲಾ- ಕಾಲೇಜುಗಳು ಸೂಚಿಸಿದ ಡ್ರೆಸ್ ಕೋಡ್ ಪಾಲಿಸಬೇಕು ಎಂದ ಅಮಿತ್ ಶಾ

ನವದೆಹಲಿ: ವಿದ್ಯಾರ್ಥಿಗಳು ಯಾವುದೇ ಧರ್ಮದವರಾದರೂ ಶಾಲೆಗಳು ಮತ್ತು ಕಾಲೇಜುಗಳು ಸೂಚಿಸಿದ ಡ್ರೆಸ್ ಕೋಡ್ ಅನ್ನು ಎಲ್ಲಾ ವಿದ್ಯಾರ್ಥಿಗಳು ತ ಅನುಸರಿಸಬೇಕು ಎಂದು ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ.

ಸಿಎನ್‌ಎನ್ ನ್ಯೂಸ್ 18 ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅಮಿತ್‌ ಶಾ, ಶಾಲಾ-ಕಾಲೇಜುಗಳಲ್ಲಿ ಮಕ್ಕಳನ್ನು ಧರ್ಮಕ್ಕಿಂತ ಮಿಗಿಲಾಗಿ ನೋಡಬೇಕು. ತಮ್ಮ ತಮ್ಮ ಧರ್ಮ ಯಾವುದೇ ಇದ್ದರೂ ಶಾಲೆಗಳಲ್ಲಿ ವಿದ್ಯಾರ್ಥಿಯು ಕಡ್ಡಾಯ ಮಾಡಿದ ಸಮವಸ್ತ್ರವನ್ನು ಅನುಸರಿಸಬೇಕು ಎಂದು ನಾನು ವೈಯಕ್ತಿಕವಾಗಿ ಭಾವಿಸುತ್ತೇನೆ” ಎಂದು ಅವರು ಹೇಳಿದರು.
ವಿಷಯವು ನ್ಯಾಯಾಲಯದಲ್ಲಿದೆ ಮತ್ತು ನ್ಯಾಯಾಲಯದ ನಿರ್ಧಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು … ನ್ಯಾಯಾಲಯವು ತನ್ನ ತೀರ್ಪು ನೀಡುವವರೆಗೂ ನನ್ನ ವೈಯಕ್ತಿಕ ನಂಬಿಕೆ ಹೀಗಿದೆ. ಆದರೆ ನ್ಯಾಯಾಲಯವು ತನ್ನ ತೀರ್ಪು ನೀಡಿದ ನಂತರ ನಾನೂ ಸಹ ಅದನ್ನು ಒಪ್ಪಿಕೊಳ್ಳಬೇಕು” ಎಂದು ಅವರು ಹೇಳಿದರು. .
ಕಳೆದ ತಿಂಗಳು ಉಡುಪಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ತಲೆಗೆ ರುಮಾಲು ಹಿಜಾಬ್‌ ತರಗತಿಗೆ ಹಾಜರಾಗಿದ್ದ ಆರು ವಿದ್ಯಾರ್ಥಿಗಳು ನಿಗದಿತ ವಸ್ತ್ರ ಸಂಹಿತೆ ಉಲ್ಲಂಘಿಸಿದ್ದರಿಂದ ಕಾಲೇಜಿಗೆ ಪ್ರವೇಶ ನಿಷೇಧಿಸಿದಾಗ ಹಿಜಾಬ್ ಗಲಾಟೆ ಶುರುವಾಗಿತ್ತು.

ಓದಿರಿ :-   ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಬಲವಂತದ ಮತಾಂತರ: ಸಿಬಿಐ-ಎನ್‌ಐಎ ತನಿಖೆಗೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ಈ ವಿಚಾರದಲ್ಲಿ ರಾಜಕೀಯ ಮಾಡಲು ಯತ್ನಿಸುತ್ತಿರುವ ವಿರೋಧಿಗಳು ಯಶಸ್ವಿಯಾಗುವುದಿಲ್ಲ. ಅವರ ಪ್ರಯತ್ನಗಳು ವಿಫಲವಾಗುತ್ತವೆ ಎಂದು ಗೃಹ ಸಚಿವರು ಹೇಳಿದರು.
ಈ ವಿಷಯವು ದೊಡ್ಡ ವಿವಾದಕ್ಕೆ ಕಾರಣವಾಯಿತು ಮತ್ತು ಕರ್ನಾಟಕ ಹೈಕೋರ್ಟ್‌ನಲ್ಲಿ ಈ ವಿಷಯದ ವಿಚಾರಣೆ ನಡೆಯುತ್ತಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ