ಹಿಜಾಬ್‌ ವಿವಾದದ ಮಧ್ಯೆ ರಾಹುಲ್ ಗಾಂಧಿ ಭೇಟಿ ಮಾಡಲಿರುವ ಕರ್ನಾಟಕದ ಕಾಂಗ್ರೆಸ್ ನಾಯಕರು

ಬೆಂಗಳೂರು: ವಿಧಾನಸಭೆ ಮತ್ತು ಪರಿಷತ್ತಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಸಚಿವ ಕೆ.ಎಸ್.ಈಶ್ವರಪ್ಪ ಅವರ ಕೆಂಪುಕೋಟೆಯಲ್ಲಿ ಕೇಸರಿ ಧ್ವಜದ ವಿವಾದಾತ್ಮಕ ಹೇಳಿಕೆಗೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್‌ ನಿಂದ ಗದ್ದಲ ನಡೆಯುತ್ತಿದೆ. ಆದರೆ ರಾಜ್ಯಾದ್ಯಂತ ನಡೆಯುತ್ತಿರುವ ರಾಜ್ಯಾದ್ಯಂತ ಹಿಜಾಬ್‌ ವಿವಾದದಲ್ಲಿ ಕಾಂಗ್ರೆಸ್‌ ಯಾವ ನಿಲುವು ತಳೆಯಬೇಕು ಎಂದು ಗೊಂದದಲ್ಲಿದೆ. ಇದರ ಮಧ್ಯೆಯೇ ಕಾಂಗ್ರೆಸ್‌ನ ಕೆಲ ನಾಯಕರನ್ನು ಪಕ್ಷದ ವರಿಷ್ಠರು ದೆಹಲಿಗೆ ಬುಲಾವ್‌ ಮಾಡಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.
ಶುಕ್ರವಾರ ನವದೆಹಲಿಯಲ್ಲಿ ಪಕ್ಷದ ಕೇಂದ್ರ ನಾಯಕತ್ವವು ರಾಜ್ಯ ನಾಯಕರನ್ನು ಚರ್ಚೆಗೆ ಆಹ್ವಾನಿಸಿದ್ದು, 2023ರ ವಿಧಾನಸಭಾ ಚುನಾವಣೆಯ ನೀಲನಕ್ಷೆ ಕುರಿತು ಚರ್ಚಿಸಲು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಸಭೆಯ ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ ಮತ್ತು ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷರು ಸೇರಿದಂತೆ ರಾಜ್ಯ ನಾಯಕರಿಗೆ ಬುಲಾವ್‌ ಬಂದಿದೆ ಎಂದು ಹೇಳಲಾಗುತ್ತಿದೆ. ಹಿಜಾಬ್ ವಿವಾದದ ಬಗ್ಗೆ ಪಕ್ಷ ಯಾವ ನಿಲುವು ತೆಗೆದುಕೊಳ್ಳಬೇಕು ಎಂಬ ಬಗ್ಗೆ ಚಚರ್ಚೆಯಾಗಲಿದೆ ಆದರೆ ಪಕ್ಷದ ಮೂಲಗಳು ಹೇಳುತ್ತವೆ.
ಹೆಚ್ಚಿನ ಹಿರಿಯ ನಾಯಕರು ಮುಂದಿನ ಚುನಾವಣೆಯಲ್ಲಿ ಬಹುಸಂಖ್ಯಾತರ ಮತ ಕಳೆದಹೋಗುವ ಭೀತಿಯಿಂದ ಅಲ್ಪಸಂಖ್ಯಾತ ಸಮುದಾಯದ ಬೆಂಬಲಕ್ಕೆ ಬಹಿರಂಗವಾಗಿ ಬೆಂಬಲಿಸಲು ಹಿಂದೇಟು ಹಾಕುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಬೇಕಾದರೆ ಬಹುಸಂಖ್ಯಾತರ ಮತವೂ ಬಹಳ ಮುಖ್ಯ ಎಂಬುದು ಅವರ ನಿಲುವು. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಚರ್ಚಿಸಲು ಕಾಂಗ್ರೆಸ್ನ ಪ್ರಮುಖ ನಾಯಕನ್ನು ಹೈಕಮಾಂಡ್‌ ಬುಲಾವ್‌ ಮಾಡಿದೆ ಎನ್ನಲಾಗಿದೆ.
ಪಕ್ಷದ ಅಲ್ಪಸಂಖ್ಯಾತ ಸಮುದಾಯದ ಶಾಸಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಭೇಟಿಯಾಗಿ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಚರ್ಚಿಸಿದ್ದಾರೆ.
ಆದರೆ, ಈ ವಿಚಾರ ವಿಧಾನಸಭೆ ಮತ್ತು ಪರಿಷತ್ತಿನಲ್ಲಿ ಪ್ರಸ್ತಾಪವಾಗಿಲ್ಲ. ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ನಿಯೋಗದಲ್ಲಿದ್ದ ಅಲ್ಪಸಂಖ್ಯಾತ ಸಮುದಾಯದ ಶಾಸಕರು ಪಕ್ಷವು ಎಚ್ಚರಿಕೆಯಿಂದ ಈ ಸಮಸ್ಯೆಯನ್ನು ನಿಭಾಯಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಆದರೆ ಮೌನ ವಹಿಸುವ ಬದಲು ಇಂತಹ ವಿಚಾರಗಳಲ್ಲಿ ಪಕ್ಷ ದೃಢ ನಿಲುವು ತಳೆಯಬೇಕು ಎಂದು ಕೆಲವರು ಹೇಳುತ್ತಾರೆ. ರಾಜ್ಯದ ಮುಂಬರುವ ವಿಧಾನಸಭೆ ಚುನಾವಣೆಗೂ ಮುನ್ನ ಇಂತಹ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದ್ದು, ನಾವು ಈಗಲೇ ಈ ಬಗ್ಗೆ ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು ಎಂಬುದು ಪಕ್ಷದ ಕೆಲವರ ಅಭಿಪ್ರಾಯವಾಗಿದೆ.
ಈಗ, ಸಭೆಯು ಹಲವಾರು ಇತರ ಹಿರಿಯ ನಾಯಕರನ್ನು ಒಳಗೊಂಡಿರುತ್ತದೆ ಮತ್ತು ವಿಧಾನಸಭೆ ಚುನಾವಣೆಗೆ ಹೆಚ್ಚು ಸಮಯವಿಲ್ಲದ ಕಾರಣ ವಿವಿಧ ವಿಷಯಗಳ ಬಗ್ಗೆ ಅವರ ಅಭಿಪ್ರಾಯವನ್ನು ಕೇಳಲಾಗುತ್ತದೆ. ಅಲ್ಲದೆ, ನಮ್ಮ ಶಾಸಕರಿಗೆ ನಮ್ಮ ಕಾರ್ಯಯೋಜನೆಯನ್ನು ವಿವರಿಸಿ, ಅವರಿಗೆ ತರಬೇತಿ ನೀಡಿ ಮತ್ತು ಯಾರು ಯಾವ ಸಮಸ್ಯೆಗಳ ಬಗ್ಗೆ ಮಾತನಾಡಬೇಕು ಎಂಬುದನ್ನು ನಿರ್ಧರಿಸಬಹುದು ಎಂದು ಪಕ್ಷದ ಮೂಲಗಳು ಹೇಳುತ್ತವೆ. ಈ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ರಾಜ್ಯದಿಂದ ಸುಮಾರು 10-15 ನಾಯಕರನ್ನು ಸಭೆಗೆ ಕರೆಯಲಾಗಿದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement