ಬಜರಂಗದಳ ಕಾರ್ಯಕರ್ತನ ಹತ್ಯೆ ನಂತರ ಶಿವಮೊಗ್ಗ ಉದ್ವಿಗ್ನ… ಪ್ರಮುಖಾಂಶಗಳು

ಶಿವಮೊಗ್ಗ: ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ 23 ವರ್ಷದ ಬಜರಂಗದಳ ಕಾರ್ಯಕರ್ತ ಹರ್ಷ ಎಂಬಾತನಿಗೆ ಮಾರಾಕಾಸ್ತ್ರಗಳಿಂದ ಇರಿದು ಕೊಲೆ ಮಾಡಲಾಗಿದೆ. ತೀವ್ರವಾಗಿ ಸೀಗೆಹಟ್ಟಿ ನಿವಾಸಿ ಹರ್ಷ ಅವರನ್ನು ಮೆಕ್‌ಗನ್‌ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕರ್ನಾಟಕ ಪೊಲೀಸರು ಭಾರತಿ ಕಾಲೋನಿ ಪ್ರದೇಶದಲ್ಲಿ ನಡೆದ ಚೂರಿ ಇರಿತಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ.

ಈ ಕುರಿತು ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ, ಹರ್ಷ ಹತ್ಯೆಯಲ್ಲಿ ಐವರು ವ್ಯಕ್ತಿಗಳ ಪಾತ್ರವಿದೆ ಎಂದು ಪೊಲೀಸರು ಶಂಕಿಸಿದ್ದಾರೆ ಎಂದು ತಿಳಿಸಿದ್ದಾರೆ.
ಸೋಮವಾರ, ಹರ್ಷ ಸಾವಿನ ಕುರಿತು ಶಿವಮೊಗ್ಗದಲ್ಲಿ ಪ್ರತಿಭಟನೆ ಹಿಂಸಾತ್ಮಕ ತಿರುವು ಪಡೆದುಕೊಂಡಿತು, ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದರು. ಶಸ್ತ್ರಾಸ್ತ್ರಗಳನ್ನು ಝಳಪಿಸಲಾಯಿತು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದರು. ಪರಿಸ್ಥಿತಿ ಕೈ ಮೀರದಂತೆ ನೋಡಿಕೊಳ್ಳಲು ಪೊಲೀಸರು ಗುಂಪನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಬೇಕಾಯಿತು.
ಕ್ಷಿಪ್ರ ಕಾರ್ಯಾಚರಣೆ ಪಡೆಯ ಕಟ್ಟುನಿಟ್ಟಿನ ಕಣ್ಗಾವಲಿನಲ್ಲಿ ಹರ್ಷ ಅವರ ಮೃತದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯಲಾಯಿತು. ಸಚಿವರಾದ ಈಶ್ವರಪ್ಪ, ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಸೇರಿದಂತೆ ಹಲವರು ಹರ್ಷ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಪ್ರಮುಖ ಬೆಳವಣಿಗೆಗಳು
* ಈವರೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಹಾಗೂ ಮೂವರು ಶಿವಮೊಗ್ಗದವರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಪ್ರಕರಣದಲ್ಲಿ ಐವರು ಪಾಲ್ಗೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಕೆಪಿಎಸ್‌ಸಿ ಹಗರಣ; ಐಎಎಸ್‌ ಅಧಿಕಾರಿ ಜ್ಞಾನೇಂದ್ರಕುಮಾರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸರ್ಕಾರದ ಅನುಮತಿ

*ಶಿವಮೊಗ್ಗದಲ್ಲಿ ಹರ್ಷ ಪಾರ್ಥಿವ ಶರೀರದ ಮೆರವಣಿಗೆ ಸಂದರ್ಭದಲ್ಲಿ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಹಾಗೂ ಕಲ್ಲು ತೂರಾಟ ನಡೆಸಲಾಗಿದೆ. ಪೊಲೀಸರು ಜನರನ್ನು ನಿಯಂತ್ರಿಸಲು ಅಶ್ರುವಾಯು ಸಿಡಿಸಿದ್ದಾರೆ.

* ಯಾವುದೇ ಅಹಿತಕರ ಘಟನೆಯನ್ನು ತಡೆಯಲು ಕರ್ನಾಟಕದ ಶಿವಮೊಗ್ಗದಲ್ಲಿ CrPC ಯ ಸೆಕ್ಷನ್ 144 ಅನ್ನು ವಿಧಿಸಲಾಗಿದೆ. ಶಿವಮೊಗ್ಗದಲ್ಲಿ ಕನಿಷ್ಠ 1,200 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಇನ್ನೂ 400 ಸಿಬ್ಬಂದಿಯನ್ನು ಬೆಂಗಳೂರು ಮತ್ತು ರಾಜ್ಯದ ಇತರ ಭಾಗಗಳಿಂದ ಜಿಲ್ಲೆಗೆ ಕರೆಸಲಾಗಿದೆ.

*ಶಿವಮೊಗ್ಗದಲ್ಲಿ ಮಂಗಳವಾರವೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗೂ ಫೆ.23ರ ಬೆಳಗಿನ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

* ಮೃತ ಹರ್ಷ ಅವರ ಕುಟುಂಬದವರನ್ನು ಸೋಮವಾರ ಭೇಟಿ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಹರ್ಷ ಅವರ ಸಾವಿಗೂ ನಡೆಯುತ್ತಿರುವ ಹಿಜಾಬ್ ವಿವಾದಕ್ಕೂ ಸಂಬಂಧವಿಲ್ಲ. ಆದಾಗ್ಯೂ, “ಒಂದು ತೀರ್ಮಾನಕ್ಕೆ ಬರುವ ಮೊದಲು ನಾವು ಹೆಚ್ಚಿನ ತನಿಖೆಗಾಗಿ ಕಾಯಬೇಕಾಗಿದೆ” ಎಂದು ಅವರು ಹೇಳಿದರು.

*. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲರೂ ಶಾಂತಿ ಕಾಪಾಡುವಂತೆ ಶಾಂತವಾಗಿರುವಂತೆ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ತನಿಖೆ ನಡೆಯುತ್ತಿದೆ ಮತ್ತು ಇದಕ್ಕೆ ಕಾರಣರಾದವರನ್ನು ಆದಷ್ಟು ಬೇಗ ಬಂಧಿಸಲಾಗುವುದು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಮತ್ತು ಜನರು ಸಹ ಶಾಂತವಾಗಿರಲು ನಾನು ವಿನಂತಿ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಕೆಪಿಎಸ್‌ಸಿ ಹಗರಣ; ಐಎಎಸ್‌ ಅಧಿಕಾರಿ ಜ್ಞಾನೇಂದ್ರಕುಮಾರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸರ್ಕಾರದ ಅನುಮತಿ

* ಹರ್ಷ ಸಾವಿನ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಹಸ್ತಾಂತರಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಸಚಿವ ಈಶ್ವರಪ್ಪ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.

* ಸಚಿವ ಈಶ್ವರಪ್ಪ ಅವರು ಮುಸ್ಲಿಂ ಗೂಂಡಾಗಳು ಈ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

* ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ ಒತ್ತಾಯಿಸಿದ್ದಾರೆ ಹಾಗೂ ಹರ್ಷ ಅವರ ಹಂತಕರಿಗೆ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ.

* ಹಿಜಾಬ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರಿಂದ ಹರ್ಷ ಅವರನ್ನು ಕೊಲೆ ಮಾಡಲಾಗಿದೆ ಎಂದು ಬಿಜೆಪಿ ಮುಖಂಡ ಬಿಎಲ್ ಸಂತೋಷ್ ಟ್ವೀಟ್ ಮಾಡಿದ್ದಾರೆ.

* ರಾಜ್ಯದಲ್ಲಿ ಈ ರೀತಿಯ ಘಟನೆಯನ್ನು ಕಾಂಗ್ರೆಸ್ ಮತ್ತು ಬಿಜೆಪಿ ಬಯಸಿದೆ ಎಂದು ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ಶಾಂತಿ ಕದಡಲು ಪಕ್ಷಗಳು ಯತ್ನಿಸುತ್ತಿವೆ ಎಂದು ಆರೋಪಿಸಿದರು.

* ಕರ್ನಾಟಕ ಸರ್ಕಾರವು ಮೃತ ಹರ್ಷ ಅವರ ಕುಟುಂಬಕ್ಕೆ ವಿತ್ತೀಯ ಸಹಾಯವಾಗಿ 2 ಲಕ್ಷ ರೂಪಾಯಿಗಳನ್ನು ಘೋಷಿಸಿದೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement