ಶಿವಮೊಗ್ಗದಲ್ಲಿ ಬಜರಂಗ ದಳ ಕಾರ್ಯಕರ್ತನ ಹತ್ಯೆ: ತನಿಖೆ ಬಳಿಕ ಎಲ್ಲವೂ ಗೊತ್ತಾಗಲಿದೆ-ಸಿಎಂ ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಬಜರಂಗ ದಳ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿದ್ದು, ತನಿಖೆಯ ನಂತರ ಎಲ್ಲವೂ ಹೊರಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ಹರ್ಷ ಎಂಬ ಯುವಕನ ಹತ್ಯೆ ನಡೆದಿದ್ದು, ಇದರಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬುದರ ಕುರಿತು ಪ್ರಾಥಮಿಕ ಮಾಹಿತಿ ಕಲೆ ಹಾಕಲಾಗುತ್ತಿದೆ. ಅಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ತನಿಖೆ ಮಾಡಿ ತಪ್ಪಿತಸ್ತರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಘಟನೆಗೆ ಮುಸ್ಲಿಂ ಗೂಂಡಾಗಳೇ ಕಾರಣರು ಎಂದು ಸಚಿವ ಈಶ್ವರಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಅವರು ಹೇಳಿದ ಮಾತ್ರಕ್ಕೆ ನಾನು ಅದನ್ನೇ ಹೇಳಬೇಕು ಎಂದಿಲ್ಲ. ತನಿಖೆ ನಡೆದ ಬಳಿಕ ಎಲ್ಲವೂ ಹೊರಗೆ ಬರಲಿದೆ ಎಂದು ಪ್ರತಿಕ್ರಿಯಿಸಿದರು.
ಶಿವಮೊಗ್ಗದಲ್ಲಿ ಇಬ್ಬರು ಸಚಿವರಿದ್ದಾರೆ ಆದರೆ ಅಲ್ಲಿ ಕೊಲೆ ನಡೆದಿದೆ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರ ಮಾತಿನಲ್ಲಿ ತರ್ಕ ಇರುವುದಿಲ್ಲ, ಅವರು ಯಾವಾಗಲೂ ತರ್ಕ ಬಿಟ್ಟೆ ಮಾತನಾಡುತ್ತಾರೆ ಎಂದರು.

ಪ್ರಮುಖ ಸುದ್ದಿ :-   ಸಿದ್ದರಾಮಯ್ಯ ವಿರುದ್ಧದ ನಕಲಿ ಸ್ಟಿಂಗ್‌ ಆಪರೇಷನ್‌ ಪ್ರಕರಣ: ದೆಹಲಿಯ ವ್ಯಕ್ತಿಯ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement