ಭಾರತೀಯರನ್ನು ಕರೆತರಲು ಉಕ್ರೇನ್‌ಗೆ ಹೊರಟ ಏರ್‌ ಇಂಡಿಯಾ ವಿಮಾನ

ನವದೆಹಲಿ: ಉಕ್ರೇನ್‌ ಮೇಲೆ ರಷ್ಯಾದ ಸಂಭವನೀಯ ದಾಳಿ ಭೀತಿಯ ಹಿನ್ನೆಲೆಯಲ್ಲಿ ಭಾರತದ ಪ್ರಜೆಗಳನ್ನು ಮೂರು ವಿಶೇಷ ವಿಮಾನಗಳ ಮೂಲಕ ಕರೆತರಲು ಸರ್ಕಾರ ಮುಂದಾಗಿದೆ.
ಹದಗೆಡುತ್ತಿರುವ ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ಮಧ್ಯೆ, ಸಿಲುಕಿರುವ ಭಾರತೀಯ ಪ್ರಜೆಗಳನ್ನು ಮರಳಿ ಕರೆತರಲು ಉಕ್ರೇನ್‌ಗೆ ಇಂದು (ಫೆಬ್ರವರಿ 22) ಮತ್ತು ಶನಿವಾರ (ಫೆಬ್ರವರಿ 26) ನಡುವೆ ಮೂರು ವಿಮಾನಗಳನ್ನು ನಿರ್ವಹಿಸುವುದಾಗಿ ಟಾಟಾ ಒಡೆತನದ ಏರ್ ಇಂಡಿಯಾ ಮಂಗಳವಾರ ತಿಳಿಸಿದೆ. ಇತ್ತೀಚೆಗೆ ಟಾಟಾ ಗ್ರೂಪ್‌ಗೆ ಮಾರಾಟವಾದ ರಾಷ್ಟ್ರೀಯ ವಿಮಾನಯಾನ ಸಂಸ್ಥೆ, ರಾಜಧಾನಿ ಕೈವ್ ಬಳಿಯ ಬೋರಿಸ್‌ಪಿಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನಗಳು ಕಾರ್ಯನಿರ್ವಹಿಸಲಿವೆ ಎಂದು ಹೇಳಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಟಾಟಾ ಒಡೆತನದ ಏರ್ ಇಂಡಿಯಾದ (ಎಐ) ವಿಶೇಷ ವಿಮಾನವು ಇಂದು, ಮಂಗಳವಾರ ರಾತ್ರಿ ಉಕ್ರೇನ್ (ಬೊರಿಸ್ಪಿಲ್) ವಿಮಾನ ನಿಲ್ದಾಣದಿಂದ ಸುರಕ್ಷಿತ ವಾಪಸಾತಿಗಾಗಿ ನೋಂದಾಯಿಸಿಕೊಂಡಿದ್ದ ಭಾರತೀಯ ಪ್ರಜೆಗಳನ್ನು ವಾಪಸ್ ಕರೆತರಲಿದೆ.

ಇಂದು ನಿಗದಿಯಾಗಿದ್ದ ವಿಶೇಷ ವಿಮಾನ ಈಗಾಗಲೇ ಭಾರತೀಯ ಪ್ರಜೆಗಳನ್ನು ಕರೆತರಲು ಉಕ್ರೇನ್‌ಗೆ ತೆರಳಿದೆ. 200ಕ್ಕೂ ಹೆಚ್ಚು ಆಸನಗಳ ಸಾಮರ್ಥ್ಯವನ್ನು ವಿಶೇಷ ವಿಮಾನವು ಇಂದು, ಮಂಗಳವಾರ ರಾತ್ರಿ ಉಕ್ರೇನ್ (ಬೊರಿಸ್ಪಿಲ್) ವಿಮಾನ ನಿಲ್ದಾಣದಿಂದ ಸುರಕ್ಷಿತ ವಾಪಸಾತಿಗಾಗಿ ನೋಂದಾಯಿಸಿಕೊಂಡಿದ್ದ ಭಾರತೀಯ ಪ್ರಜೆಗಳನ್ನು ವಾಪಸ್ ಕರೆತರಲಿದೆ.

ಇಂದಿನ ಪ್ರಮುಖ ಸುದ್ದಿ :-   ನ್ಯಾಯಾಧೀಶರ ಶಿಫಾರಸುಗಳನ್ನು ತಡೆಹಿಡಿಯುತ್ತಿರುವ ಕೇಂದ್ರದ ಬಗ್ಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಕಳವಳ

200 ಆಸನಗಳ ಸಾಮರ್ಥ್ಯದ ಡ್ರೀಮ್‌ ಲೈನರ್ B-787 ವಿಮಾನವು ಇಂದು ರಾತ್ರಿ ಉಕ್ರೇನ್‌ನಿಂದ ದೆಹಲಿಗೆ ಬಂದಿಳಿಯಲಿದ್ದು, ಮತ್ತೆರಡು ವಿಮಾನಗಳು ಫೆ.24 ಮತ್ತು ಫೆ.26ರಂದು ಕಾರ್ಯಾಚರಣೆ ನಡೆಸಲಿವೆ.
ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ನಡೆಸುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಭಾರತೀಯರು ವಿಮಾನಗಳ ಮೂಲಕ ಭಾರತಕ್ಕೆ ತೆರಳಬಹುದು ಎಂದು ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹೇಳಿತ್ತು.
ರಷ್ಯಾದೊಂದಿಗೆ ಉಕ್ರೇನ್ ಗಡಿಯಲ್ಲಿ ಉಲ್ಬಣಗೊಳ್ಳುತ್ತಿರುವ ಉದ್ವಿಗ್ನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತವು, ಮಂಗಳವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವಿಶೇಷ ಸಭೆಯಲ್ಲಿ ಪರಸ್ಪರ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳಲು ಎಲ್ಲಾ ಕಡೆಯವರು ಅತ್ಯಂತ ಸಂಯಮ ಮತ್ತು ರಾಜತಾಂತ್ರಿಕ ಪ್ರಯತ್ನಗಳನ್ನು ತೀವ್ರಗೊಳಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿತ್ತು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement