ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಇನ್ನೆರಡು ದಿನ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ಬುಧವಾರ ಬೆಳಗ್ಗೆ ವರೆಗೆ ಇದ್ದ ಕರ್ಫ್ಯೂವನ್ನು ಈಗ ಶುಕ್ರವಾರ ಬೆಳಿಗ್ಗೆ ವಿಸ್ತರಣೆ ಮಾಡಲಾಗಿದೆ. ಕೆಲವು ಘಟನೆಗಳು ಹಿನ್ನೆಲೆ ಶುಕ್ರವಾರ ಬೆಳಗ್ಗೆವರೆಗೆ ಕರ್ಫ್ಯೂ ವಿಸ್ತರಣೆ ಮಾಡಲಾಗುತ್ತಿದೆ ಎಂದರು.
ಕರ್ಫ್ಯೂ ಜಾರಿಯಲ್ಲಿ ಇರುವ ಅವಧಿಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಗರ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ 9 ಗಂಟೆ ವರೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.
ದೊಡ್ಡಪೇಟೆ, ಕೋಟೆ ಮತ್ತು ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
advertisement
9535127775 / 9901837775 / 6364528715 / 08362775155 / https://icsmpucollege.com/
ನಿಮ್ಮ ಕಾಮೆಂಟ್ ಬರೆಯಿರಿ