ಅನುದಾನಿತ ಪ್ರೌಢಶಾಲೆಗಳ 1924 ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ನಾಗೇಶ

ಬೆಂಗಳೂರು : ಶಿಕ್ಷಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ ಅವರು ಸಂತೋಷದ ಸುದ್ದಿ ನೀಡಿದ್ದು, ಅನುದಾನಿತ ಪ್ರೌಢಶಾಲೆಗಳ 1924 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಕುರಿತು ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಸಚಿವರು ಅನುದಾನಿತ ಪ್ರೌಢಶಾಲೆಗಳ 1924 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ, ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
2015 ರ ಡಿಸೆಂಬರ್ ಅಂತ್ಯದ ವರೆಗೆ ಅನುದಾನಿತ ಪ್ರೌಢಶಾಲೆಗಳ 3689 ಹುದ್ದೆಗಳು ಖಾಲಿಯಿತ್ತು. ಅವುಗಳಲ್ಲಿ 3633 ಹುದ್ದೆಗಳ ಭರ್ತಿಗೆ ಒಪ್ಪಿಗೆ ನೀಡಲಾಗಿದ್ದು, 1452 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, 2181 ಹುದ್ದೆಗಳ ಭರ್ತಿ ಮಾಡಬೇಕಿದೆ. ಈಗ 1924 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement