ಎಸ್ಎಫ್​​ಜೆ ನಂಟಿರುವ ಪಂಜಾಬ್ ಪಾಲಿಟಿಕ್ಸ್ ಟಿವಿಯ ಆ್ಯಪ್, ವೆಬ್‌ಸೈಟ್, ಸಾಮಾಜಿಕ ಮಾಧ್ಯಮ ಖಾತೆಗಳಿಗೆ ನಿರ್ಬಂಧ ವಿಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ಗುಪ್ತಚರ ಮಾಹಿತಿಗಳ ಆಧಾರದ ಮೇರೆಗೆ ಮತ್ತು ಕಳೆದ ವರ್ಷ ಜಾರಿಗೆ ತಂದ ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳ ಅಡಿಯಲ್ಲಿ ನೀಡಲಾದ ತುರ್ತು ಅಧಿಕಾರಗಳನ್ನು ಅನ್ವಯಿಸಿ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ (I&B) ವಿದೇಶಿ ಮೂಲದ ‘ಪಂಜಾಬ್ ಪಾಲಿಟಿಕ್ಸ್ ಟಿವಿ’ಯ ಡಿಜಿಟಲ್ ಮಾಧ್ಯಮ ಸಂಪನ್ಮೂಲಗಳನ್ನು ನಿಷೇಧಿಸಿದೆ.
ಇದು ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಘಟನೆ ಜೊತೆ ನಂಟು ಹೊಂದಿದೆ ಮತ್ತು ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರಲು ಪ್ರಯತ್ನಿಸುತ್ತಿದೆ ಎಂದು ಸಚಿವಾಲಯ ಹೇಳಿದೆ. ಮಂಗಳವಾರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನೀಡಿದ ಹೇಳಿಕೆಯಲ್ಲಿ, “ಸಿಖ್ಸ್ ಫಾರ್ ಜಸ್ಟಿಸ್ (SFJ) ನೊಂದಿಗೆ ನಿಕಟ ಸಂಪರ್ಕ ಹೊಂದಿರುವ ವಿದೇಶಿ ಮೂಲದ ‘ಪಂಜಾಬ್ ಪಾಲಿಟಿಕ್ಸ್ ಟಿವಿ’ಯ ಅಪ್ಲಿಕೇಶನ್‌ಗಳು, ವೆಬ್‌ಸೈಟ್ ಮತ್ತು ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಲು ಆದೇಶಿಸಲಾಗಿದೆ. ಹಾಗೂ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967 ರ ಅಡಿಯಲ್ಲಿ ಕಾನೂನುಬಾಹಿರವೆಂದು ಘೋಷಿಸಲಾಗಿದೆ ಎಂದು ತಿಳಿಸಿದೆ.
ನಡೆಯುತ್ತಿರುವ ರಾಜ್ಯ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರಲು ಆನ್‌ಲೈನ್ ಮಾಧ್ಯಮವನ್ನು ಬಳಸಲು ಪ್ರಯತ್ನಿಸುತ್ತಿದೆ ಎಂಬ ಗುಪ್ತಚರ ಮಾಹಿತಿಗಳನ್ನು ಅವಲಂಬಿಸಿ, ಸಚಿವಾಲಯವು ಫೆಬ್ರವರಿ 18 ರಂದು ಪಂಜಾಬ್‌ನ ಪಾಲಿಟಿಕ್ಸ್ ಟಿವಿಯ ಡಿಜಿಟಲ್ ಮಾಧ್ಯಮ ಸಂಪನ್ಮೂಲಗಳನ್ನು ನಿರ್ಬಂಧಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.
ನಿರ್ಬಂಧಿಸಲಾದ ಅಪ್ಲಿಕೇಶನ್‌ಗಳು, ವೆಬ್‌ಸೈಟ್ ಮತ್ತು ಸಾಮಾಜಿಕ ಮಾಧ್ಯಮ ಖಾತೆಗಳ ವಿಷಯಗಳು ಪ್ರತ್ಯೇಕತಾವಾದವನ್ನು ಪ್ರಚೋದಿಸುವಂತಿದ್ದವು. ಇವು ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆ, ರಾಜ್ಯದ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಹಾನಿಕಾರಕವೆಂದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ನಿರ್ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ.
.2019 ರ ಜನವರಿಯಲ್ಲಿ ಯುಎಪಿಎ ಅಡಿಯಲ್ಲಿ ಖಲಿಸ್ತಾನಿ ಪರವಾದ ಎಸ್‌ಎಫ್‌ಜೆಯನ್ನು ನಿಷೇಧಿಸಲು ಸರ್ಕಾರ ಆದೇಶಗಳನ್ನು ಹೊರಡಿಸಿತ್ತು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಯಿತು. ಆದರೆ ಯುಎಪಿಎ ಟ್ರಿಬ್ಯೂನಲ್ 2020 ರಲ್ಲಿ ನಿಷೇಧವನ್ನು ಎತ್ತಿಹಿಡಿದಿದೆ.

ಪ್ರಮುಖ ಸುದ್ದಿ :-   ವೀಡಿಯೊ: ತಾಪಮಾನ ಹೆಚ್ಚಳದಿಂದ ವಿದ್ಯಾರ್ಥಿಗಳು ಪಾರಾಗಲು ಕ್ಲಾಸ್‌ ರೂಮ್‌ ಅನ್ನೇ ಈಜುಕೊಳವಾಗಿ ಪರಿವರ್ತಿಸಿದ ಶಾಲೆ...!

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement