ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಮತ್ತಿಬ್ಬರ ಬಂಧನ

ಶಿವಮೊಗ್ಗ: ಭಜರಂಗ ದಳದ ಕಾರ್ಯಕರ್ತ ಹರ್ಷ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದು, ಇದರೊಂದಿಗೆ ಪ್ರಕರಣ ಸಂಬಂಧ ಬಂಧಿಸಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಹತ್ಯೆ ಪ್ರಕರಣದ ಸಂಬಂಧ ಪೊಲೀಸರು ನಿನ್ನೆ, ಸೋಮವಾರ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಇಂದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಬ್ಬರೂ ಶಿವಮೊಗ್ಗ ಮೂಲದವರಾಗಿದ್ದು, ಇದಲ್ಲದೆ, 12 ಮಂದಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆಂದು ಹೇಳಲಾಗಿದೆ.
ಬಜರಂಗದಳ ಕಾರ್ಯಕರ್ತ ಹರ್ಷ ಎಂಬುವವರ ಬರ್ಬರ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಸೋಮವಾರ ಶಿವಮೊಗ್ಗ ಹೊತ್ತಿ ಉರಿದಿದೆ.
ನಿಷೇಧಾಜ್ಞೆ ನಡುವೆಯೇ ದಿನವಿಡೀ ಉದ್ರಿಕ್ತ ಗುಂಪುಗಳು ಕಂಡ ಕಂಡಲ್ಲಿ ಆಸ್ತಿಪಾಸ್ತಿಗಳ ಮೇಲೆ ಕಲ್ಲು ತೂರಿ, ವಾಹನಗಳು, ಅಂಗಡಿಗಳಿಗೆ ಬೆಂಕಿ ಹಚ್ಚುವ ಮೂಲಕ ಹಿಂಸಾಚಾರಕ್ಕಿಳಿದಿತ್ತು. ಈ ವೇಳೆ 25ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಹಿಂಸಾಚಾರ ನಿಯಂತ್ರಣಕ್ಕೆ ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿ ಹಾಗೂ ಗಾಳಿಯಲ್ಲಿ ಗುಂಡು ಹಾರಿಸಿ ಗುಂಪು ಚದುರಿಸಿದರು.
ಶಿವಮೊಗ್ಗ ಹಿಂಸಾಚಾರದಲ್ಲಿ 30ಕ್ಕೂ ಹೆಚ್ಚು ಅಂಗಡಿಗಳು, 32ಕತ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿದ್ದು, ಹತ್ತಕ್ಕೂ ಹೆಚ್ಚು ವಾಹನಗಳು ಸುಟ್ಟುಕರಕಲಾಗಿವೆ. ಘಟನೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆಯನ್ನು ಎರಡು ದಿನ ವಿಸ್ತರಿಸಲಾಗಿದೆ. ಇದೇ ವೇಳೆ ಸೋಮವಾರ ರಾತ್ರಿ 10ರಿಂದ ಬುಧವಾರ ಬೆಳಿಗ್ಗೆ 6ರ ವರೆಗೆ ಕರ್ಫ್ಯೂವನ್ನೂ ಘೋಷಿಸಲಾಗಿದೆ. ಶಾಲೆ-ಕಾಲೇಜುಗಳಿಗೂ ರಜೆ ಮುಂದುವರಿಸಲಾಗಿದೆ.

ಪ್ರಮುಖ ಸುದ್ದಿ :-   ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ತಲೆದಂಡ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement