ನಡು ರಸ್ತೆಯಲ್ಲಿ ಹೊತ್ತಿ ಉರಿದ ಬಸ್…!

posted in: ರಾಜ್ಯ | 0

ಉಡುಪಿ: ನಡುರಸ್ತೆಯಲ್ಲಿ ಖಾಸಗಿ ಬಸ್  ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ಬುಧವಾರ ಮುಂಜಾನೆ ನಡೆದಿದೆ.
ಖಾಸಗಿ ಬಸ್ ಬಳ್ಳಾರಿಯ ಕೊಟ್ಟೂರಿನಿಂದ ಮಂಗಳೂರಿಗೆ ಹೋಗುತ್ತಿತ್ತು. ಮಣಿಪಾಲದ ಟೈಗರ್ ಸರ್ಕಲ್ ಬಳಿ ಬರುತ್ತಿದ್ದಂತೆ ಬಸ್‌ ಹೊತ್ತಿ ಉರಿದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಪ್ರಾರಂಭದಲ್ಲಿ ಚಾಲಕನ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಪ್ರಯಾಣಿಕರನ್ನು ಕೆಳಕ್ಕೆ ಇಳಿಸಲಾಯಿತು. ಬಸ್ಸು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಮುಂದಿನ 15 ದಿನಗಳ ಕಾಲ ಅಧಿಕಾರಿಗಳು ರಜೆ ತೆಗೆದುಕೊಳ್ಳುವಂತಿಲ್ಲ:ಸಿಎಂ ಬೊಮ್ಮಾಯಿ ಸೂಚನೆ
advertisement

ನಿಮ್ಮ ಕಾಮೆಂಟ್ ಬರೆಯಿರಿ