ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಹರ್ಷ ಹತ್ಯೆ ಪ್ರಕರಣದ ತನಿಖೆ ತೀವ್ರವಾಗಿ ನಡೆಯುತ್ತಿದ್ದು, ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದರ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಜನರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಕರ್ಫ್ಯೂ ಸಹ ಜಾರಿಯಲ್ಲಿದೆ. ತನಿಖೆಯಲ್ಲಿ ಯಾವೆಲ್ಲ ಅಂಶಗಳು ಕಂಡುಬರುತ್ತವೆ ಎಂಬುದರ ಮೇಲೆ ಯಾವ ಸಂಸ್ಥೆಗೆ ತನಿಖೆ ವಹಿಸಬೇಕು ಎಂಬ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದರು.
ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ. ಅದನ್ನು ನಾವು ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಶಿವಮೊಗ್ಗದಲ್ಲಿ ನಡೆದ ಮೆರವಣಿಗೆ ಸರ್ಕಾರಿ ಪ್ರಾಯೋಜಿತ ಮೆರವಣಿಗೆ, ಅಲ್ಲಿ ಸೆಕ್ಷನ್ 144 ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪದ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನವರು ಈ ಹಿಂದೆ ಇಂಥ ಸರ್ಕಾರಿ ಪ್ರಾಯೋಜಿತ ಕೆಲಸಗಳನ್ನು ಮಾಡಿದ್ದಾರೆ. ಹೀಗಾಗಿಅನುಭವದಿಂದ ಇಂಥ ಮಾತುಗಳು ಆಡಿದ್ದಾರೆ ಎಂದರು.
ನಿಮ್ಮ ಕಾಮೆಂಟ್ ಬರೆಯಿರಿ