ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಂಧನಕ್ಕೊಳಗಾದ ಮಹಾರಾಷ್ಟ್ರ ನವಾಬ್ ಮಲಿಕ್ ಅವರನ್ನು ಮಾರ್ಚ್ 3ರ ವರೆಗೆ ಇಡಿ ವಶಕ್ಕೆ ನೀಡಿದ ಕೋರ್ಟ್‌

ಮುಂಬೈ: ಪರಾರಿಯಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಸಚಿವ ಮತ್ತು ಎನ್‌ಸಿಪಿ ವಕ್ತಾರ ನವಾಬ್ ಮಲಿಕ್ ಅವರನ್ನು ಮುಂಬೈ ವಿಶೇಷ ಕೋರ್ಟ್‌ ಮಾರ್ಚ್ 3ರ ವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ.
ನವಾಬ್ ಮಲಿಕ್ ಅವರನ್ನು ಬುಧವಾರ ಬೆಳಗ್ಗೆ ದಕ್ಷಿಣ ಮುಂಬೈನಲ್ಲಿರುವ ಇಡಿ ಕಚೇರಿಗೆ ವಿಚಾರಣೆಗಾಗಿ ಕರೆದೊಯ್ಯಲಾಯಿತು, ನಂತರ ಅವರನ್ನು ಬಂಧಿಸಲಾಯಿತು. 62 ವರ್ಷದ ಎನ್‌ಸಿಪಿ ನಾಯಕನನ್ನು ಮಧ್ಯಾಹ್ನದ ವೇಳೆಗೆ ವೈದ್ಯಕೀಯ ತಪಾಸಣೆಗಾಗಿ ಸರ್ಕಾರಿ ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಪರಾರಿಯಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ, ಆತನ ಸಹಾಯಕರು ಮತ್ತು ಮುಂಬೈ ಭೂಗತ ಜಗತ್ತಿನ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯವು ಇಂದು ಮಧ್ಯಾಹ್ನ ಅವರನ್ನು ಬಂಧಿಸಿದ ನಂತರ ಮಹಾರಾಷ್ಟ್ರ ಸಚಿವರನ್ನು ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ನ್ಯಾಯಾಲಯವು ನವಾಬ್ ಮಲಿಕ್ ಅವರನ್ನು ಮಾರ್ಚ್ 3 ರವರೆಗೆ ಇಡಿ ವಶಕ್ಕೆ ನೀಡಿದೆ.

ಏನಿದು ಪ್ರಕರಣ?
ಮೂಲಗಳ ಪ್ರಕಾರ, ದಾವೂದ್ ಇಬ್ರಾಹಿಂನ ಆಪ್ತರೊಂದಿಗೆ ನವಾಬ್ ಮಲಿಕ್ ನಡೆಸಿದ ವ್ಯವಹಾರ ಇಡಿ ಸ್ಕ್ಯಾನರ್ ಅಡಿಯಲ್ಲಿತ್ತು. ವಿಚಾರಣೆಗೆ ಹಾಜರಾಗುವಂತೆ ಇಡಿ ನವಾಬ್ ಮಲಿಕ್‌ಗೆ ಸಮನ್ಸ್ ಜಾರಿ ಮಾಡಿತ್ತು. ದಾವೂದ್ ಇಬ್ರಾಹಿಂ, ಆತನ ಸಹೋದರ ಅನೀಸ್, ಇಕ್ಬಾಲ್, ಸಹಾಯಕ ಚೋಟಾ ಶಕೀಲ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಸಂಸ್ಥೆ ತನಿಖೆ ನಡೆಸುತ್ತಿತ್ತು.

ಪ್ರಮುಖ ಸುದ್ದಿ :-   ಭಾರತದ ಜೊತೆ ಪಾಕಿಸ್ತಾನದ ಕದನ ವಿರಾಮದ ಬಗ್ಗೆ ಚೀನಾ ಅಸಮಾಧಾನ? ಇದಕ್ಕೆ ಕಾರಣ ಏನು ಗೊತ್ತೆ...?

ಕಳೆದ ವಾರ, ಭೂಗತ ಜಗತ್ತು ಮತ್ತು ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಕಾರಣಗಳಿಗಾಗಿ ಇಡಿ ಮುಂಬೈನ ವಿವಿಧ ಸ್ಥಳಗಳಲ್ಲಿ ಹುಡುಕಾಟ ನಡೆಸಲು ಪ್ರಾರಂಭಿಸಿತು. ದಾವೂದ್ ಇಬ್ರಾಹಿಂ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇತ್ತೀಚೆಗೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ನಡೆದಿದೆ.
ಇಡಿ ಅಧಿಕಾರಿಗಳು ಮಲಿಕ್ ಮತ್ತು ಅವರಿಗೆ ಆಪ್ತರಾಗಿರುವವರ ಇತರ ಕೆಲವು ವ್ಯವಹಾರಗಳ ಬಗ್ಗೆಯೂ ಪರಿಶೀಲಿಸುತ್ತಿದ್ದಾರೆ. ಮೂಲಗಳ ಪ್ರಕಾರ, ಭೂಗತ ಜಗತ್ತಿನೊಂದಿಗೆ ಸಂಪರ್ಕ ಹೊಂದಿದ ವ್ಯಕ್ತಿಗಳೊಂದಿಗೆ ನವಾಬ್ ಮಲಿಕ್ ಸಂಪರ್ಕಿಸುವ ಹಣದ ಜಾಡು ಕಂಡುಬಂದಿರುವುದಾಗಿ ಇಡಿ ಹೇಳಿಕೊಂಡಿದೆ. ನಿರ್ದಿಷ್ಟ ರಿಯಲ್ ಎಸ್ಟೇಟ್ ಯೋಜನೆಯಲ್ಲಿ ನವಾಬ್ ಮಲಿಕ್ ಮಾಡಿದ ಬೇನಾಮಿ ಹೂಡಿಕೆಯ ವಿವರಗಳು ತಮ್ಮ ಬಳಿ ಇವೆ ಎಂದು ಇಡಿ ಹೇಳುತ್ತದೆ. ಈ ಹಿನ್ನೆಲೆಯಲ್ಲಿ ಅವರನ್ನು ಕಸ್ಟಡಿಗೆ ಕೇಳಲಾಗಿತ್ತು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement