ಕರ್ನಾಟಕದಲ್ಲಿ ಕೋವಿಡ್‌ ಸಕ್ರಿಯ ಪ್ರಕರಣಗಳಲ್ಲಿ ಭಾರೀ ಇಳಿಕೆ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ರಾಜ್ಯದಲ್ಲಿ ಗುರುವಾರ ಹೊಸದಾಗಿ ಕೇಸ್ 588 ಕೊರೊನಾ ಸೋಂಕು ಮತ್ತು 19 ಮರಣ ದಾಖಲಾಗಿದೆ. ಇದೇವೇಳೆ 1,692 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 8,255 ಇಳಿಕೆ ಕಂಡಿದ್ದು, ಪಾಸಿಟಿವಿಟಿ ದರ 0.84%ಕ್ಕೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 353 ಹೊಸದಾಗಿ ಸೋಂಕು ಪತ್ತೆಯಾಗಿದ್ದು, 14 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಜಿಲ್ಲಾವಾರು ಸೋಂಕಿನ ಮಾಹಿತಿ
ಬಾಗಲಕೋಟೆ 10, ಬಳ್ಳಾರಿ 14, ಬೆಳಗಾವಿ 28, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 353, ಬೀದರ್ 2, ಚಾಮರಾಜನಗರ 2, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 6, ಚಿತ್ರದುರ್ಗ 9, ದಕ್ಷಿಣ ಕನ್ನಡ 23, ದಾವಣಗೆರೆ 6, ಧಾರವಾಡ 3, ಗದಗ 1, ಹಾಸನ 6, ಹಾವೇರಿ 4, ಕಲಬುರಗಿ 11, ಕೊಡಗು 15, ಕೋಲಾರ 1, ಕೊಪ್ಪಳ 0, ಮಂಡ್ಯ 4, ಮೈಸೂರು 28, ರಾಯಚೂರು 4, ರಾಮನಗರ 1, ಶಿವಮೊಗ್ಗ 7, ತುಮಕೂರು 8, ಉಡುಪಿ 15, ಉತ್ತರ ಕನ್ನಡ 23, ವಿಜಯಪುರ 5 ಮತ್ತು ಯಾದಗಿರಿಯಲ್ಲಿ 4 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಓದಿರಿ :-   ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: 32 ಶೈಕ್ಷಣಿಕ ಜಿಲ್ಲೆಗೆ ಎ ಗ್ರೇಡ್, ಮೊದಲನೇ ಸ್ಥಾನ ಹಂಚಿಕೊಂಡ 145 ವಿದ್ಯಾರ್ಥಿಗಳು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ