ಕುಂದಾಪುರ: ವಿದ್ಯಾರ್ಥಿನಿಯರಿಗೆ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು ಅವರನ್ನು ತಕ್ಷಣವೇ ವಜಾಗೊಳಿಸಲು ಆಗ್ರಹಿಸಿ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಗುರುವಾರ (ಫೆ.24) ಪ್ರತಿಭಟನೆ ನಡೆಸಿದರು.
advertisement
9535127775 / 9901837775 / 6364528715 / 08362775155 / https://icsmpucollege.com/
ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ವಿದ್ಯಾರ್ಥಿನಿಯರಿಗೆ ರಾತ್ರಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು ಈ ಬಗ್ಗೆ ಪ್ರಾಂಶುಪಾಲರಿಗೆ ದೂರು ನೀಡಿದರೂ ಶಿಸ್ತು ಕ್ರಮ ಆಡಳಿತ ಮಂಡಳಿ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ಕಾಲೇಜು ಮುಂಭಾಗ ಧರಣಿ ನಡೆಸಿದರು.
ಸ್ಥಳಕ್ಕೆ ಆಗಮಿಸಿದ ಕಾಲೇಜು ಪ್ರಾಂಶುಪಾಲರು ಶಿಸ್ತುಕ್ರಮ ಜರುಗಿಸುವ ಭರವಸೆ ನೀಡಿದರು. ಆದರೆ ಭರವಸೆಗೆ ಜಗ್ಗದ, ಸುಡು ಬಿಸಿಲನ್ನು ಲೆಕ್ಕಿಸದೆ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿದ್ದು, ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರನ್ನು ಸ್ಥಳಕ್ಕೆ ಕರೆಸಬೇಕೆಂದು ಪಟ್ಟು ಹಿಡಿದರು. ಸ್ಥಳಕ್ಕೆ ಆಗಮಿಸಿದಂತ ಪೊಲೀಸರು, ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ