ವಿದ್ಯಾರ್ಥಿಗಳ ಬೇಸಿಗೆ ರಜೆ ಅವಧಿ ಕಡಿತ; ಬೇಗನೆ ಶಾಲೆ ಆರಂಭಿಸಲು ಸರ್ಕಾರದ ನಿರ್ಧಾರ- ಯಾವಾಗ ಆರಂಭ ? ಇಲ್ಲಿದೆ ಮಾಹಿತಿ

posted in: ರಾಜ್ಯ | 0

ಬೆಂಗಳೂರು: ಬದಲಾದ ಕೋವಿಡ್‌ ಪರಿಸ್ಥಿತಿಗೆ ಅನುಗುಣವಾಗಿ ಮಕ್ಕಳ ಶೈಕ್ಷಣಿಕ ಪ್ರಗತಿ ಗಮನದಲ್ಲಿಟ್ಟು ಈ ವರ್ಷ ಶಾಲೆಯನ್ನು ಬೇಗನೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ಮೇ 16ರಿಂದ 2022-23ರ ಶೈಕ್ಷಣಿಕ ವರ್ಷ ಆರಂಭವಾಗಲಿದೆ.
ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಮುಕ್ತಾಯಗೊಳಿಸುವ ಮತ್ತು 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸುವಂತ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಲಾಗಿದೆ. ಈ ಬಾರಿ ಏಪ್ರಿಲ್ 10ರಿಂದ ಮೇ15ರ ವರೆಗೆ ಬೇಸಿಗೆ ರಜೆ ನೀಡಲು ಸರ್ಕಾರ ನಿರ್ಧರಿಸಿದ್ದು, ಮುಂದಿನ ಶೈಕ್ಷಣಿಕ ವರ್ಷ ಮೇ 16ರಿಂದ ಆರಂಭವಾಗಲಿದೆ.

ಕೋವಿಡ್ ಕಾರಣದಿಂದ ನಿರಂತರವಾಗಿ ಭೌತಿಕ ತರಗತಿಗಳು ನಡೆಯಲಿಲ್ಲ, ಜೊತೆಗೆ ಆನ್ ಲೈನ್ ಶಿಕ್ಷಣ ಪರಿಣಾಮಕಾರಿಯಾಗಿಲ್ಲ ಎಂಬ ವ್ಯಾಪಕ ದೂರುಗಳು ಇವೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಹೀಗಾಗಿ ಈ ಕಲಿಕಾ ಹಿನ್ನಡೆಯನ್ನು ಸರಿದೂಗಿಸಲು ‘ಕಲಿಕಾ ಚೇತರಿಕಾ ಕಾರ್ಯಕ್ರಮ”ವನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಆಯೋಜಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಹಿಂದೆ ಶಾಲಾ ಶೈಕ್ಷಣಿಕ ವರ್ಷವು ಮೇ 29ರಿಂದ ಆರಂಭವಾಗಿ ಎಪ್ರಿಲ್ 10ಕ್ಕೆ ಮುಕ್ತಾಯವಾಗುತ್ತಿತ್ತು.
ಈ ಶೈಕ್ಷಣಿಕ ಚಟುವಟಿಕೆಗಳ ಪಟ್ಟಿಯಂತೆ 2021-22ನೇ ಸಾಲಿನ 1 ರಿಂದ 9ನೇ ತರಗತಿಗಳ ವಾರ್ಷಿಕ ಪರೀಕ್ಷೆ ಮಾರ್ಚ್ 24ರಿಂದ ಆರಂಭಗೊಳ್ಳಲಿದೆ. ಅಲ್ಲದೇ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬೇಸಿಗೆ ರಜೆ ಏಪ್ರಿಲ್ 10ರಿಂದ ಆರಂಭವಾಗಲಿದೆ.
ಕೋವಿಡ್ ಪ್ರತಿಕೂಲ ಸನ್ನಿವೇಶದಿಂದಾಗಿ 2019-220, 2020-21 ಮತ್ತು 2021-22ನೇ ಸಾಲಿನ ಶೈಕ್ಷಣಿಕ ಸಾಲುಗಳಲ್ಲಿ ಶಾಲೆಗಳು ಸ್ಥಗಿತಗೊಳಿಸಿ, ನಡೆದ ಕಾರಣ ಶೇ.50 ರಿಂದ 60ರಷ್ಟು ದಿನಗಳಲ್ಲಿ ಮಾತ್ರ ಭೌತಿಕವಾಗಿ ಶಾಲಾ ತರಗತಿಗಳು ನಡೆಸಲಾಗಿದೆ.
ಹೀಗಾಗಿ ರಾಜ್ಯದ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಕಲಿಕೆಗೆ ಹಿನ್ನಡೆ ಉಂಟಾಗಿದೆ. ಈ ಹಿನ್ನಲೆಯಲ್ಲಿ ಮುಂಬವರು ಶೈಕ್ಷಣಿಕ ವರ್ಷ 2022-23ರಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಈ ವರ್ಷದ ಬೇಸಿಗೆ ರಜೆಯನ್ನು ದಿನಾಂಕ 10-04-2022 ರಿಂದ 15-05-2022ರ ವರೆಗೆ ನೀಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷ ಮೇ 16ರಿಂದ ಪ್ರಾರಂಭಿಸಲು ತೀರ್ಮಾನಿಸಲಾಗಿದೆ.

ಓದಿರಿ :-   ರಾಜ್ಯ ಸಭಾ ಚುನಾವಣೆ: ಜೈರಾಮ ರಮೇಶ್ ಕಾಂಗ್ರೆಸ್ ಅಭ್ಯರ್ಥಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ