ಹೈಕಮಾಂಡ್‌ ಬುಲಾವ್‌: ದೆಹಲಿಗೆ ತೆರಳಿದ ರಾಜ್ಯ ಕಾಂಗ್ರೆಸ್ ನಾಯಕರು

ಬೆಂಗಳೂರು: ರಾಜ್ಯದ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಇರುವಾಗಲೇ ಕಾಂಗ್ರೆಸ್ ಅದಕ್ಕಾಗಿ ತಯಾರಿಗೆ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಕೆಲವು ನಾಯಕರಿಗೆ ಹೈಕಮಾಂಡ್ ಬುಲಾವ್ ಮಾಡಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ದೆಹಲಿ ವಿಮಾನ ಹತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಕಾಂಗ್ರೆಸ್ ನ 15 ನಾಯಕರು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಶುಕ್ರವಾರ ಹೈಕಮಾಂಡ್‌ ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನಿವಾಸದಲ್ಲಿ ಸಭೆ ನಡೆಯಲಿದ್ದು, ರಾಜ್ಯ ವಿಧಾನಸಭೆ ಚುನಾವಣೆಗೆ ಮೊದಲು ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.
ಮುಖ್ಯವಾಗಿ ನಾಯಕರ ನಡುವೆ ಸಮನ್ವಯ ಮೂಡಿಸುವ ಪ್ರಯತ್ನದ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದ್ದು, ನಂತರ ರಾಜ್ಯದಲ್ಲಿ ಮುಂದಿನ ಅವಧಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಯಾವೆಲ್ಲ ಪ್ರಯತ್ನಗಳನ್ನು ಮಾಡಬೇಕು, ಪಕ್ಷದ ಸಂಘಟನೆ, ಸರ್ಕಾರದ ವಿರುದ್ಧ ನಿರಂತರ ಹೋರಾಟ, ಬಿಜೆಪಿ ಕಾರ್ಯಕ್ರಮಕ್ಕೆ ಪರ್ಯಾಯ ಕಾರ್ಯಕ್ರಮ ರೂಪಿಸುವ ನಿಟ್ಟಿನಲ್ಲಿ ಚರ್ಚೆಗಳು ನಡೆಯುವ ಸಾಧ್ಯತೆ ಇದೆ.
ಸಭೆಯಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಜೊತೆಗೆ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಧ್ರುವ ನಾರಾಯಣ್, ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ದಿನೇಶ ಗುಂಡೂರಾವ್, ಕೆ.ಹೆಚ್ ಮುನಿಯಪ್ಪ, ಆರ್.ವಿ.ದೇಶಪಾಂಡೆ  ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement