ಬಂಧಿತ ಎನ್‌ಸಿಪಿ ನಾಯಕ ನವಾಬ್ ಮಲಿಕ್ ಮುಂಬೈ ಆಸ್ಪತ್ರೆಗೆ ದಾಖಲು

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬುಧವಾರ ಬಂಧಿತರಾಗಿರುವ ಎನ್‌ಸಿಪಿ ನಾಯಕ ನವಾಬ್ ಮಲಿಕ್ ಅವರನ್ನು ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಮೂಲಗಳು ತಿಳಿಸಿವೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.
ವೈದ್ಯರ ಸಲಹೆಯಂತೆ ಎನ್ ಸಿಪಿ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಅಧಿಕೃತ ದೃಢೀಕರಣವಿಲ್ಲ.

ನವಾಬ್ ಮಲಿಕ್ ಅವರ ಪುತ್ರಿ ಸನಾ ಖಾನ್ ಅವರು ತಮ್ಮ ತಂದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಕ್ಷದ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಮಲಿಕ್ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಎಂದು ಅವರು ಹೇಳಿದರು.
ಎನ್‌ಸಿಪಿ ನಾಯಕ ನವಾಬ್‌ ಮಲಿಕ್‌ ಕಚೇರಿಯು ಅವರು ಜೆಜೆ ಆಸ್ಪತ್ರೆಯಲ್ಲಿ ವೈದ್ಯಕೀಯ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಟ್ವೀಟ್ ಮಾಡಿದೆ.

https://twitter.com/OfficeofNM/status/1497135715351920640?ref_src=twsrc%5Etfw%7Ctwcamp%5Etweetembed%7Ctwterm%5E1497135715351920640%7Ctwgr%5E%7Ctwcon%5Es1_&ref_url=https%3A%2F%2Fwww.indiatoday.in%2Findia%2Fstory%2Farrested-ncp-leader-nawab-malik-admitted-to-jj-hospital-1917827-2022-02-25

ಮಾರ್ಚ್ 3ರ ವರೆಗೆ ಇಡಿ ಕಸ್ಟಡಿಯಲ್ಲಿರುವ ನವಾಬ್ ಮಲಿಕ್ ಅವರನ್ನು ಸಾಮಾನ್ಯ ತಪಾಸಣೆಗಾಗಿ ಶುಕ್ರವಾರ ಬೆಳಿಗ್ಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅವರನ್ನು ದಾಖಲಿಸಿಕೊಳ್ಳಬೇಕಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಹಾ ಅಘಾಡಿ ಸರ್ಕಾರದ ಸಚಿವ ನವಾಬ್ ಮಲಿಕ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಬಂಧಿಸಿದೆ.

ಪ್ರಮುಖ ಸುದ್ದಿ :-   "ನನ್ನ 90 ಸೆಕೆಂಡುಗಳ ಭಾಷಣವು ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟದಲ್ಲಿ ತಲ್ಲಣ ಮೂಡಿಸಿದೆ" : ಪ್ರಧಾನಿ ಮೋದಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement