ಬಿಬಿಎಂಪಿ ಕೇಂದ್ರ ಕಚೇರಿ ಸೇರಿ 27 ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ

posted in: ರಾಜ್ಯ | 0

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳು ಸೇರಿ 27 ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆಸಿದೆ.
ಬಿಬಿಎಂಪಿ‌ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ 200ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದಾರೆ ಬಿಬಿಎಂಪಿಯಲ್ಲಿ ಭ್ರಷ್ಟಾಚಾರದ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಕಚೇರಿ ಸೇರಿದಂತೆ 27 ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆದಿದೆ. ದಾಖಲೆಗಳ ಪರಿಶೀಲನೆ ನಡೆದಿದೆ ಎಂದು ವರದಿಗಳು ತಿಳಿಸಿವೆ.

ಸಾರ್ವಜನಿಕರ ಸೋಗಿನಲ್ಲಿ ಬಿಬಿಎಂಪಿ ಕಚೇರಿಗೆ ಬಂದ ಎಸಿಬಿ ಅಧಿಕಾರಿಗಳು ರಾಜಕಾಲುವೆ, ಜಾಹೀರಾತು, ಆರೋಗ್ಯ ವಿಭಾಗ ಸೇರಿದಂತೆ ಇತರೆ ವಿಭಾಗಗಳ ಮೇಲೆ ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳದ ನಾಲ್ವರು ಎಸ್​ಪಿಗಳು, ಡಿವೈಎಸ್​ಪಿಗಳು, ಇನ್ಸ್​ಪೆಕ್ಟರ್​ಗಳು ಸೇರಿದಂತೆ 200ಕ್ಕೂ ಹೆಚ್ಚು ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಬೃಹತ್ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಮಧಯವರ್ತಿಗಳ ಜೊತೆ ಸೇರಿಕೊಂಡು ರಾಜ್ಯದ ಬೊಕ್ಕಸಕ್ಕೆ ನಷ್ಟ ಮಾಡಿದ ದೂರುಗಳಿವೆ. ಅವುಗಳ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಎಸಿಬಿ ದಾಳಿ ನಡೆಸಲಾಗಿದೆ ಎಂದು ಎಸಿಬಿ ತಿಳಿಸಿದೆ.

ಓದಿರಿ :-   ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: 32 ಶೈಕ್ಷಣಿಕ ಜಿಲ್ಲೆಗೆ ಎ ಗ್ರೇಡ್, ಮೊದಲನೇ ಸ್ಥಾನ ಹಂಚಿಕೊಂಡ 145 ವಿದ್ಯಾರ್ಥಿಗಳು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ