ವಿಶ್ವ ವಿದ್ಯಾಲಯಗಳಲ್ಲಿ ಇ-ಆಫೀಸ್ ಕಡ್ಡಾಯ, ಮಾರ್ಚ್ 1ರ ವರೆಗೆ ಗಡುವು ನೀಡಿದ ಸಚಿವ ಅಶ್ವತ್ಥ ನಾರಾಯಣ

posted in: ರಾಜ್ಯ | 0

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ವಿಶ್ವವಿದ್ಯಾಲಯಗಳು ಮಾರ್ಚ್ 1ರಿಂದ ತನ್ನ ಎಲ್ಲ ಕಡತಗಳನ್ನು ಇ-ಕಚೇರಿ ಮೂಲಕವೇ ಅನ್‍ಲೈನ್‍ನಲ್ಲಿ ಕಳುಹಿಸುವುದನ್ನು ಕಡ್ಡಾಯ ಮಾಡಲಾಗಿದೆ. ಈ ಗಡುವಿನ ನಂತರ ಭೌತಿಕವಾಗಿ ಬರುವ ಎಲ್ಲ ಕಡತಗಳನ್ನು ವಾಪಸ್ ಕಳುಹಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಕುರಿತು ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ಇ-ಆಫೀಸ್ ತಂತ್ರಾಂಶದ ಮೂಲಕವೇ ಕಡತಗಳನ್ನು ಕಳುಹಿಸಲು ವಿಶ್ವ ವಿದ್ಯಾಲಯಗಳಿಗೆ ಈ ಹಿಂದೆಯೇ ಸೂಚಿಸಲಾಗಿತ್ತು. ಆದರೂ ಕೆಲ ವಿದ್ಯಾಲಯಗಳಲ್ಲಿ ಈ ಕೆಲಸ ಆಗಿದೇ ಇರುವುದು ಗಮನಕ್ಕೆ ಬಂದಿದೆ ಎಂದು ಅವರು ಹೇಳಿದ್ದಾರೆ.
ತಮ್ಮ ಕಚೇರಿಯು ಈಗಾಗಲೇ ಸಂಪೂರ್ಣವಾಗಿ ಇ-ಆಫೀಸ್ ತಂತ್ರಾಂಶದ ಮೇಲೆಯೇ ಕೆಲಸ ಮಾಡುತ್ತಿದೆ. ಆದರೆ ಇಲಾಖೆಗೆ ವಿಶ್ವ ವಿದ್ಯಾಲಯಗಳಿಂದ ಎಲ್ಲ ಪತ್ರಗಳು, ಕಡತಗಳು ಮತ್ತು ಪ್ರಸ್ತಾವನೆಗಳು ಭೌತಿಕ ರೂಪದಲ್ಲಿಯೇ ಬರುತ್ತಿವೆ. ಹೀಗಾದರೆ ಇ-ಆಫೀಸ್ ತಂತ್ರಾಂಶ ಅಳವಡಿಕೆಯ ಮೂಲ ಉದ್ದೇಶವೇ ವಿಫಲವಾಗುತ್ತದೆ ಎಂದು ಸಚಿವ ಅಶ್ವತ್ಥ ನಾರಾಯಣ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರತಿಯೊಂದು ಕೆಲಸವೂ ತ್ವರಿತವಾಗಿ ಮತ್ತು ಪಾರದರ್ಶಕವಾಗಿ ನಡೆಯುವಂತೆ ಮಾಡಬೇಕೆನ್ನುವುದು ಇ-ಆಫೀಸ್ ತಂತ್ರಾಂಶದ ಗುರಿಯಾಗಿದೆ. ವಿಶ್ವ ವಿದ್ಯಾಲಯಗಳು ಸಮಕಾಲೀನ ಶೈಲಿಯನ್ನು ಅಳವಡಿಸಿಕೊಳ್ಳದಿದ್ದರೆ ಅಪ್ರಸ್ತುತವಾಗಲಿವೆ ಎಂದು ಸಚಿವರು ಹೇಳಿದ್ದಾರೆ.

ಓದಿರಿ :-   ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ...!

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ