ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ನಂತರ ನಗರ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ಹೇರಿದ್ದ ನಿಷೇಧಾಜ್ಞೆ ವಿಸ್ತರಿಸಲಾಗಿದೆ. ಶನಿವಾರ ಬೆಳಗ್ಗೆ ಆರು ಗಂಟೆಯಿಂದ ಸೋಮವಾರ ಫೆಬ್ರವರಿ 28ರ ಬೆಳಗ್ಗೆ 9 ಗಂಟೆವರೆಗೆ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಹೇಳಿಕೆ ನೀಡಿದ್ದಾರೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಫೆಬ್ರವರಿ 26 ಶನಿವಾರ ಬೆಳಿಗ್ಗೆ 6ರಿಂದ ಸಂಜೆ 4ಗಂಟೆ ವರೆಗೆ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ. ಆದರೆ ನಿಷೇಧಾಜ್ಞೆಯ ಸಮಯದಲ್ಲಿ ಹೆಚ್ಚು ಜನರು ಗುಂಪು ಸೇರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಶಾಲಾ ಕಾಲೇಜಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಶಿವಮೊಗ್ಗ ನಗರದಲ್ಲಿ ಶನಿವಾರ ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿಯವರು ಮನವಿ ಮಾಡಿಕೊಂಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ