ಭಾರತದಲ್ಲಿ ಮತ್ತಷ್ಟು ಕುಸಿದ ದೈನಂದಿನ ಕೋವಿಡ್‌ ಸೋಂಕಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ತೀವ್ರಗತಿಯಲ್ಲಿ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಹೊಸದಾಗಿ 13,166 ಹೊಸ ಕೋವಿಡ್ ಸೋಂಕು ಪತ್ತೆಯಾಗಿದ್ದು, 302 ಮಂದಿಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಈಗ ದೇಶದಲ್ಲಿ ಒಟ್ಟು 1,34,235 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಈವರೆಗೆ ಕಾಣಿಸಿಕೊಂಡಿರುವ ಒಟ್ಟು ಸೋಂಕಿತರಲ್ಲಿ ಶೇಕಡಾ 0.31ರಷ್ಟು ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಕಳೆದ 24 ಗಂಟೆಯಲ್ಲಿ 26,988 ಮಂದಿ ಕೋವಿಡ್​​ನಿಂದ ಚೇತರಿಕೆ ಕಂಡಿದ್ದಾರೆ. ಕೋವಿಡ್ ಸೋಂಕಿನಿಂದ ಗುಣಮುಖರಾಗಿರುವವರ ಪ್ರಮಾಣ ಶೇಕಡಾ 98.49ರಷ್ಟಿದೆ ಎಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳು ದೃಢಪಡಿಸಿವೆ.
ಈವರೆಗೆ ಸುಮಾರು 1,76,86,89,266 ಕೋಟಿ ಡೋಸ್​ ವ್ಯಾಕ್ಸಿನೇಷನ್ ನೀಡಲಾಗಿದೆ. ಗುರುವಾರ ಒಂದೇ ದಿನದಲ್ಲಿ 32,04,426 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement