ರಾಜ್ಯ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ಸಿಎಂ ಬೊಮ್ಮಾಯಿ ತಾತ್ವಿಕ ಒಪ್ಪಿಗೆ: ಷಡಕ್ಷರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆಯನ್ನು ಹಿಂಪಡೆದು, ಹಳೆಯ ನಿಯಮದಂತೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಎಂಬ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಮಾಹಿತಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಈಚೆಗೆ ಮುಖ್ಯಮಂತ್ರಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದೆವು. ಮುಖ್ಯಮಂತ್ರಿಗಳು ಪೂರಕವಾಗಿ ಸ್ಪಂದಿಸಿದ್ದಾರೆ. ಮಾರ್ಚ್ 4ರಂದು ಮಂಡಿಸುವ ಬಜೆಟ್​ನಲ್ಲಿ ಈ ಸಂಬಂಧ ಘೋಷಣೆ ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ನಡುವಣ ವೇತನ ತಾರತಮ್ಯ ಸರಿಪಡಿಸಬೇಕು ಎಂದು ಸರ್ಕಾರಿ ನೌಕರರು ಮನವಿ ಸಲ್ಲಿಸಿದರು. ಬಜೆಟ್​ನ ಪೂರ್ವ ಸಿದ್ಧತಾ ಸಭೆಯಲ್ಲಿ ಈ ಪ್ರಸ್ತಾವ ಮಾಡಲಾಯಿತು ಎಂದು ಅವರು ಮಾಹಿತಿ ನೀಡಿದರು.

ರಾಜ್ಯಾಧ್ಯಕ್ಷ ಸಿ.ಎಸ್‌.ಷಡಕ್ಷರಿ ನೇತೃತ್ವದ ನಿಯೋಗ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಸರಿ ಸಮಾನವಾದ ವೇತನ ಶ್ರೇಣಿ ಮತ್ತು ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೆ ನೀಡಿದರೆ ಸರ್ಕಾರಕ್ಕೆ ₹10,656 ಕೋಟಿ ಹೆಚ್ಚುವರಿಯಾಗಿ ಬೇಕಾಗುತ್ತದೆ. ಈಗ ಖಾಲಿ ಇರುವ ಹುದ್ದೆಗಳಿಂದಾಗಿ ಸರ್ಕಾರಕ್ಕೆ ವರ್ಷಕ್ಕೆ ಸುಮಾರು ₹8,531 ಕೋಟಿ ಉಳಿತಾಯವಾಗುತ್ತಿದೆ. ಸರ್ಕಾರಕ್ಕೆ ಹೆಚ್ಚುವರಿಯಾಗಿ ₹2,125 ಕೋಟಿ ಬೇಕಾಗಬಹುದು ಎಂದು ಮನವರಿಕೆ ಮಾಡಿದರು.
ರಾಷ್ಟ್ರದ ಜಿಎಸ್‌ಡಿಪಿ ಅವಲೋಕಿಸಿದರೆ ರಾಜ್ಯವು ಆರ್ಥಿಕ ಬೆಳವಣಿಗೆಯಲ್ಲಿ ರಾಷ್ಟ್ರದಲ್ಲೇ 6ನೇ ಸ್ಥಾನದಲ್ಲಿದೆ. ಇದರಲ್ಲಿ ರಾಜ್ಯ ಸರ್ಕಾರಿ ನೌಕರರ ಸೇವೆ ಮತ್ತು ಪಾತ್ರ ಮುಖ್ಯವಾಗಿದೆ. ಒಟ್ಟು 28 ರಾಜ್ಯಗಳಲ್ಲಿ ಕೇಂದ್ರ ಮಾದರಿಯ ವೇತನ ಪದ್ಧತಿ ಜಾರಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

ಈ ಕುರಿತು ಅವರು ಮಾಹಿತಿ ನೀಡಿದ್ದು, ರಾಜ್ಯ ಸರ್ಕಾ ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆಯನ್ನು ಹಿಂಪಡೆದು, ಹಳೆಯ ನಿಯಮದಂತೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಎಂಬ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಮಾಡಿದ್ದು, ಇದಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರವು ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದು, ಹಳೆ ಪಿಂಚಣಿ ಯೋಜನೆಯನ್ನೇ ಜಾರಿಗೊಳಿಸಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ರಾಜಸ್ಥಾನ ಸರ್ಕಾರವು ಹೊಸ ಮಾದರಿಯ ಪಿಂಚಣಿ ಯೋಜನೆ ರದ್ದುಗೊಳಿಸಿದೆ. ಮಾರ್ಚ್ 4ರಂದು ಮಂಡಿಸುವ 2022-23ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸು ನಿರ್ಧಾರವನ್ನು ಪ್ರಕಟಿಸಬೇಕು ಎಂದು ಕೋರಿದ್ದಾರೆ.
ಏಪ್ರಿಲ್ 1, 2006ರ ನಂತರದ ನೌಕರರಿಗೆ ಹೊಸ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ. ಇದರಿಂದ ಲಕ್ಷಾಂತರ ನೌಕರರಿಗೆ ನಿವೃತ್ತಿ ನಂತರ ಅಗತ್ಯ ಸೌಲಭ್ಯಗಳು ಸಿಗುವುದಿಲ್ಲ. ಆರ್ಥಿಕ ಸೌಲಭ್ಯ ದೊರೆಯದೆ ಜೀವನ ಕಷ್ಟಸಾಧ್ಯವಾಗಿದೆ ಆದ್ದರಿಂದ ಹಳೆ ಪಿಂಚಣಿ ಯೋಜನೆಯನ್ನೇ ಜಾರಿಗೊಳಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement