ಉಕ್ರೇನ್‌ನಲ್ಲಿ ಸಿಲುಕಿದ ಕರ್ನಾಟಕದ 91 ವಿದ್ಯಾರ್ಥಿಗಳ ಬಗ್ಗೆ ಮಾಹಿತಿ

ಬೆಂಗಳೂರು: ಉಕ್ರೇನ್ ಮತ್ತು ರಷ್ಯಾ ಬಿಕ್ಕಟ್ಟಿನ ನಡುವೆ ಕರ್ನಾಟಕದ ವಿವಿಧ ಜಿಲ್ಲೆಯ 91 ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಈವರೆಗೆ ಮಾಹಿತಿ ಸಿಕ್ಕಿದೆ.
ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ 91 ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡಲ್ ಅಧಿಕಾರಿ ಡಾ ಮನೋಜ್ ರಾಜನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಖಾರಿವ್‌ ನ್ಯಾಷನಲ್‌ ಮೆಡಿಕಲ್‌ ವಿವಿಯ ವಿದ್ಯಾರ್ಥಿಗಳು ಸೇರಿದಂತೆ ಕೆಲವು ಕನ್ನಡಿಗ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿದ್ದು, ಮರಳಿ ವಾಪಸ್‌ ಬರಲು ಹರಸಾಹಸ ಪಡುತ್ತಿದ್ದಾರೆ. ವಿದ್ಯಾರ್ಥಿಗಳಲ್ಲಿ ಕೆಲವರು ಬಂಕರ್ಸ್‌ಗಳಲ್ಲಿ ರಕ್ಷಣೆ ಪಡೆದಿದ್ದಾರೆ. ರಾಜ್ಯದಲ್ಲಿ ಪೋಷಕರು ತಮ್ಮ ಮಕ್ಕಳ ಯೋಗಕ್ಷೇಮದ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ.
ಅವರನ್ನು ಸುರಕ್ಷಿತವಾಗಿ ವಾಪಸ್‌ ಕರೆತರಲು ಸರಕಾರದ ಮಟ್ಟದಲ್ಲಿ ನಿರಂತರ ಪ್ರಯತ್ನ ಸಾಗಿದೆ. ನೂರಾರು ಸಂಖ್ಯೆಯಲ್ಲಿ ಕನ್ನಡಿಗರು ಅಲ್ಲಿ ವೈದ್ಯಕೀಯ ಸೇರಿ ವಿವಿಧ ವೃತ್ತಿಪರ ಕೋರ್ಸ್‌ ಗಳನ್ನು ವ್ಯಾಸಂಗ ಮಾಡುತ್ತಿದ್ದಾರೆ.

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement