ಕರ್ನಾಟಕದಲ್ಲಿ ಹೊಸದಾಗಿ 514 ಜನರಿಗೆ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು ಶನಿವಾರ ಹೊಸದಾಗಿ 514 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ ಸೋಂಕಿನಿಂದ 19 ಮಂದಿ ಮೃತಪಟ್ಟಿದ್ದಾರೆ ಹಾಗೂ ರಾಜ್ಯದಲ್ಲಿ 6,940 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 345 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 13 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ 3,761 ಜನರಲ್ಲಿ ಕೊರೊನಾ ಸೋಂಕು ಸಕ್ರಿಯ ಪ್ರಕರಣಗಳಿವೆ.ಅ
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ

ಜಿಲ್ಲಾವಾರು ಸೋಂಕಿತರು…
ಬಾಗಲಕೋಟೆ 0, ಬಳ್ಳಾರಿ 9, ಬೆಳಗಾವಿ 20, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 345, ಬೀದರ್ 1, ಚಾಮರಾಜನಗರ 3, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 6, ಚಿತ್ರದುರ್ಗ 5, ದಕ್ಷಿಣ ಕನ್ನಡ 7, ದಾವಣಗೆರೆ 4, ಧಾರವಾಡ 14, ಗದಗ 0, ಹಾಸನ 14, ಹಾವೇರಿ 0, ಕಲಬುರಗಿ 8, ಕೊಡಗು 16, ಕೋಲಾರ 5, ಕೊಪ್ಪಳ 1, ಮಂಡ್ಯ 0, ಮೈಸೂರು 18, ರಾಯಚೂರು 0, ರಾಮನಗರ 0, ಶಿವಮೊಗ್ಗ 10, ತುಮಕೂರು 8, ಉಡುಪಿ 4, ಉತ್ತರ ಕನ್ನಡ 11, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಪ್ರಮುಖ ಸುದ್ದಿ :-   ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement