ಕನ್ನಡದ ಖ್ಯಾತ ನಟ ರವಿಚಂದ್ರನ್ ತಾಯಿ ನಿಧನ

posted in: ರಾಜ್ಯ | 0

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್​ ವೀರಸ್ವಾಮಿ, ಇಂದು, ಸೋಮವಾರ (ಫೆ.28) ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ರವಿಚಂದ್ರನ್​ ತಾಯಿ ನಿಧನಕ್ಕೆ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಪಟ್ಟಮ್ಮಾಳ್​ ವೀರಸ್ವಾಮಿ ಅವರು ಸೋಮವಾರ ಬೆಳಿಗ್ಗೆ 6:30ರ ಸುಮಾರಿಗೆ ಅವರು ನಿಧನ ಹೊಂದಿದರು. ಬೆಳಗ್ಗೆ 10:30ಕ್ಕೆ ಪಾರ್ಥಿವ ಶರೀರವನ್ನು ರಾಜಾಜಿನಗರದ ನಿವಾಸಕ್ಕೆ ತರಲಾಗುತ್ತದೆ. ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಇಂದು ಸಂಜೆಯೇ ಅಂತ್ಯಕ್ರಿಯೆ ನಡೆಯಲಿದೆ ಎಂದು ನಟ ರವಿಚಂದ್ರನ್​ ಕುಟುಂಬದವರು ತಿಳಿಸಿದ್ದಾರೆ.

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ತನಿಖೆ ನಂತರ ಪಿಎಸ್‌ಐ ಹುದ್ದೆ ಅಕ್ರಮ ಪ್ರಕರಣದ ವಿಚಾರಣೆಗೆ ವಿಶೇಷ ಕೋರ್ಟ್‌ ರಚನೆ: ಗೃಹ ಸಚಿವ ಆರಗ ಜ್ಞಾನೇಂದ್ರ
advertisement

ನಿಮ್ಮ ಕಾಮೆಂಟ್ ಬರೆಯಿರಿ