ಬೈಕಿಗೆ ಬಸ್‌ ಡಿಕ್ಕಿ: ಮೂವರ ಸಾವು

posted in: ರಾಜ್ಯ | 0

ಚಿಕ್ಕಬಳ್ಳಾಪುರ: ಭೀಕರ ರಸ್ತೆ ಅಪಘಾತವೊಂದರಲ್ಲಿ ಸ್ಕೂಟಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಮೂವರು ಸಾವಿಗೀಡಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ.
ಈ ಅಪಘಾತದಲ್ಲಿ ಬೈಕ್ ನಲ್ಲಿದ್ದಂತ ಮಹಿಳೆ ಸೇರಿ ಮೂವರು ಮೃತಪಟ್ಟಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೊನ್ನೇನಹಳ್ಳಿ ಗೇಟ್ ಬಳಿಯಲ್ಲಿ ರಸ್ತೆ ಕ್ರಾಸ್ ಮಾಡುವಾಗ, ಬೈಕ್ ಗೆ ಖಾಸಗಿ ಬಸ್ಬಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್ ನಜ್ಜು ಗುಜ್ಜಾಗಿದೆ.
ಬೈಕ್ ನಲ್ಲಿ ತೆರಳುತ್ತಿದ್ದಂತ ಮಹಿಳೆ ಸೇರಿದಂತೆ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು ಅವರನ್ನು ಬೆಂಗಳೂರು ಮೂಲದವರು ಎಂದು ಹೇಳಲಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ
advertisement

ನಿಮ್ಮ ಕಾಮೆಂಟ್ ಬರೆಯಿರಿ