ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 202 ಕೊರೊನಾ ಸೋಂಕು ಪತ್ತೆ

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 202 ಕೊರೊನಾ ಸೋಂಕುಗಳು ಪತ್ತೆಯಾಗಿವೆ. ಇದೇವೇಳೆ ರಾಜ್ಯದಲ್ಲಿ ಸೋಂಕಿಗೆ 7 ಜನ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ೯೭೧ ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 4,847 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಮಂಗಳವಾರ 150 ಕೊರೊನಾ ಪ್ರಕರಣ ಪತ್ತೆಯಾಗಿವೆ ಹಾಗೂ ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ 3,003 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಸೋಂಕಿನ ಮಾಹಿತಿ
ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 150, ಬೀದರ್ 1, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 3, ಚಿತ್ರದುರ್ಗ 2, ದಕ್ಷಿಣ ಕನ್ನಡ 1, ದಾವಣಗೆರೆ 4, ಧಾರವಾಡ 0, ಗದಗ 3, ಹಾಸನ 2, ಹಾವೇರಿ 0, ಕಲಬುರಗಿ 0, ಕೊಡಗು 0, ಕೋಲಾರ 1, ಕೊಪ್ಪಳ 0, ಮಂಡ್ಯ 0, ಮೈಸೂರು 6, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 10, ಉಡುಪಿ 2, ಉತ್ತರ ಕನ್ನಡ 4, ವಿಜಯಪುರ 2, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement